ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

ಮಂಗಳೂರು, ನ.1: ದ.ಕ. ಜಿಲ್ಲೆಯಲ್ಲಿ ಹಲವೆಡೆ ಸೋಮವಾರ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ.
ಜಿಲ್ಲೆಯ ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಮಂಗಳೂರು ನಗರ, ಗ್ರಾಮಾಂತರ, ಕಡಬ ಪುತ್ತೂರು, ಬಂಟ್ವಾಳ, ಸುಳ್ಯದಲ್ಲಿ ಉತ್ತಮ ಮಳೆಯಾಗಿದೆ.
ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಳದ ಮಲೇಶ್ವರದ ಅಂಗವಾಡಿ ಕೇಂದ್ರಕ್ಕೆ ಸಿಡಿಲು ಬಡಿದು ಬಾಗಶಃ ಹಾನಿಯಾಗಿದೆ. ತಾಲೂಕಿನಾದ್ಯಂತ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ.
ಶ್ರೀಲಂಕಾ-ತಮಿಳುನಾಡು ಕರಾವಳಿ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಬಲ ಪಡೆಯುತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಅರಬಿ ಸಮುದ್ರ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬುಧವಾರದಿಂದಲೇ ಕರಾವಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 31.6 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
Next Story





