ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ವಾರ್ಷಿಕೋತ್ಸವ

ಸುಳ್ಯ: ವಿದ್ಯಾರ್ಥಿಗಳು ಒಂದು ನಿರ್ಧಿಷ್ಟವಾದ ಗುರಿಯನ್ನು ಇಟ್ಟು. ತಮ್ಮ ಕಲಿಕೆಯನ್ನು ಮುಂದುವರಿಸಿದಾಗ ಗುರಿಯೆಡೆಗೆ ನಡೆಯಲು ಸಹಕಾರಿ ಅಗುತ್ತದೆ ಎಂದು ಮೈಸೂರು ಪೊಲೀಸ್ ತರಬೇತಿ ಕೇಂದ್ರದ ಐ.ಪಿ.ಎಸ್. ಅಧಿಕಾರಿ ಡಾ. ಧರಣಿದೇವಿ ಮಾಲಗತ್ತಿ ಹೇಳಿದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಆಶ್ರಯದಲ್ಲಿ ನಡೆದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ವಿದ್ಯಾರ್ಥಿ ಜೀವನದಲ್ಲಿ ನಿರ್ದಿಷ್ಟ ಧ್ಯೇಯವನ್ನಿಟ್ಟುಕೊಂಡು ಗುರಿಯೆಡೆಗೆ ಮುನ್ನಡೆಯ ಬೇಕೆಂದು ಹೇಳಿ ಕನ್ನಡ ಭಾಷೆಯ ಪ್ರಾಧಾನ್ಯತೆಯನ್ನು ತಿಳಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅತಿಥಿಗಳಾಗಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ನೀಲಾಂಬಿಕೆ ನಟರಾಜನ್, ಡಾ. ಶೀಲಾ ಜಿ. ನಾಯಕ್, ಡಾ. ಗೀತಾ ದೊಪ್ಪ, ಡಾ. ರಾಮಚಂದ್ರ ಭಟ್, ಡಾ. ರಂಗನಾಥ್, ಡಾ. ನಾರಾಯಣ ಹೊಳ್ಳ, ಡಾ. ಶಶಿಕಲಾ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ನಿರ್ದೇಶಕ ಕೆ.ವಿ. ಹೇಮನಾಥ್ ಭಾಗವಹಿಸಿದ್ದರು.
ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ. ನಾರಾಯಣ ಹೊಳ್ಳರನ್ನು ಇದೇ ಸಂದರ್ಭದಲ್ಲಿ ಬೀಳ್ಕೊಡಲಾಯಿತು.
ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ ನ ನಿರ್ದೇಶಕಿ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ, ಡಾ. ಐಶ್ವರ್ಯ ಕೆ.ಸಿ, ಡಾ. ಗೌತಮ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶಮಾ ಮತ್ತು ಪ್ರತೀಕ್ಷಾ ಪ್ರಾರ್ಥಿಸಿ, ಡಾ. ನೀಲಾಂಬಿಕೆ ನಟರಾಜನ್ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ನಾಯಕ ಹೇಮಂತ್ ವಂದಿಸಿದರು.
ವಿದ್ಯಾರ್ಥಿಗಳಾದ ಡಾ. ಕೀರ್ತಿ ಮತ್ತು ಅನುರಾಧಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.







