Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯೋತ್ಸವ ಪ್ರಶಸ್ತಿ ಮಿತಿಯನ್ನು 40...

ರಾಜ್ಯೋತ್ಸವ ಪ್ರಶಸ್ತಿ ಮಿತಿಯನ್ನು 40 ವರ್ಷಕ್ಕೆ ಇಳಿಸಿ: ಗಂಗಾವತಿ ಪ್ರಾಣೇಶ್

ವಾರ್ತಾಭಾರತಿವಾರ್ತಾಭಾರತಿ1 Nov 2021 11:33 PM IST
share
ರಾಜ್ಯೋತ್ಸವ ಪ್ರಶಸ್ತಿ ಮಿತಿಯನ್ನು 40 ವರ್ಷಕ್ಕೆ ಇಳಿಸಿ: ಗಂಗಾವತಿ ಪ್ರಾಣೇಶ್

ಬೆಂಗಳೂರು, ನ.1: 60 ವರ್ಷ ಕಲಾವಿದರು ಬದುಕೋದೇ ಕಷ್ಟ. ನಾವು ಊಟ ಇಲ್ದೇ ಊರೂರು ಅಲೆದಾಡೋದು, ನಿದ್ದೆ ಬಿಟ್ಟು ಕಲೆ ಮಾಡೋರು, ಇದರಿಂದ 60 ವರ್ಷ ಬದುಕೋದು ಕಷ್ಟ. ಹೀಗಾಗಿ, ರಾಜ್ಯೋತ್ಸವ ಪ್ರಶಸ್ತಿ ಮಿತಿಯನ್ನು 40 ವರ್ಷಕ್ಕೆ ಇಳಿಸಿ ಎಂದು ಸರಕಾರಕ್ಕೆ ಮನವಿ ಮಾಡುತ್ತೇನೆ ಎಂದು ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಹೇಳಿದರು. 

ರಾಜ್ಯೋತ್ಸವ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಶಸ್ತಿ ತಗೊಂಡ ಮೇಲೆ ಇನ್ನಷ್ಟು ಕೆಲಸ ಮಾಡಲು ಉತ್ಸಾಹ ಬರುತ್ತದೆ. ಇನ್ನೊಂದು ವರ್ಷ ಬಿಟ್ಟಿದ್ದರೆ ಪ್ರಶಸ್ತಿ ಮೌಲ್ಯ ಐದು ಲಕ್ಷ ಇರೋವಾಗ್ಲೆ ಕೊಡಬಹುದಿತ್ತು ಎಂದು ಹಾಸ್ಯ ಚಟಾಕಿ ಹಾರಿಸಿದರು.

ಪ್ರಶಸ್ತಿ ಪುರಸ್ಕೃತರಾದ ಅಜ್ಜಂಪುರ ಮಂಜುನಾಥ್ ಮಾತನಾಡಿ, ಸತ್ಯಕ್ಕೆ ಯಾವಾಗಲೂ ಗೆಲುವು ಸಿಗಬೇಕು. ಕತ್ತಲಿನಿಂದ ಬೆಳಕಿನೆಡೆಗೆ, ಅಸತ್ಯದಿಂದ ಸತ್ಯದೆಡೆಗೆ ನಡೆಯಬೇಕೆಂದು ನಮ್ಮ ಪರಂಪರೆ ಹೇಳುತ್ತದೆ ಎಂದರು. 

ಪ್ರಕಾಶ್ ಬೆಳವಾಡಿ ಮಾತನಾಡಿ, ಸಲಹಾ ಸಮಿತಿಯ ಕಣ್ಣಿಗೆ ನಾವು ಬಿದ್ದಿದ್ದು ಅದೃಷ್ಟ. 60-70 ನಾಟಕಗಳನ್ನು ನಿರ್ದೇಶನ ಮಾಡಿದ್ದೇನೆ. ಆದರೆ ಈಗ ಪ್ರಾತಿನಿಧ್ಯ ಸಿಕ್ಕಿದೆ. ರಂಗಭೂಮಿ ನಟರ ಮಾಧ್ಯಮ. ನಿರ್ದೇಶಕ ಎಂದು ಇರಲಿಲ್ಲ. ಮುಖ್ಯ ಪಾತ್ರದವರನ್ನು ಮಾತ್ರ ಗುರುತಿಸಲಾಗುತ್ತಿತ್ತು. ಈಗ ನಿರ್ದೇಶಕರನ್ನು ಗುರುತಿಸಿದ್ದು ಸಂತೋಷದ ವಿಷಯ ಎಂದರು.

ಸಾವಿರಾರು ಅನಾಥ ಶವಗಳನ್ನು ಮಣ್ಣುಮಾಡಿರುವ ದೊಮ್ಮಲೂರು ಮುನಿಯಪ್ಪ, 30 ವರ್ಷ ಪೌರಕಾರ್ಮಿಕರಾಗಿ ದುಡಿದ ರತ್ನಮ್ಮ ಶಿವಪ್ಪ, ಸಿನಿಮಾ ಕ್ಷೇತ್ರದ ಡೈನಾಮಿಕ್ ಹೀರೋ ದೇವರಾಜ್, ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್, ಪ್ಯಾರಾ ಒಲಂಪಿಕ್‍ನಲ್ಲಿ ಚಿನ್ನದ ಪದಕ ಪಡೆದ ಬೆಂಗಳೂರಿನ ಕೆ.ಗೋಪಿನಾಥ್, ಶಿವಮೊಗ್ಗದ ಯೋಗ ಶಿಕ್ಷಕ ಶ್ರೀಕಂಠ, ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾದ ಯಾದಗಿರಿ ಜಿಲ್ಲೆಯ ಮಹದೇವಪ್ಪ ಕಡೆಚೂರು ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 

ಬಳ್ಳಾರಿ ಜಿಲ್ಲೆಯ ನೀರಾವರಿ ತಜ್ಞ, ಬೆಳ್ಳಂದೂರು ವರ್ತೂರು ಕೆರೆಗಳ ಮೇಲೆ ಕೆಲಸ ಮಾಡಿದ ಕ್ಯಾಪ್ಟನ್ ರಾಜಾರಾವ್, ಧಾರವಾಡದಲ್ಲಿ ಬಡವರಿಗಾಗಿ ಆಸ್ಪತ್ರೆ ಆರಂಭಿಸಿ ಒಂದು ಲಕ್ಷಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆ ಮಾಡಿ ಬಡಜನರ ವೈದ್ಯರೆಂದೇ ಹೆಸರುವಾಸಿಯಾದ ಡಾ. ಶಿವನಗೌಡ ರುದ್ರಗೌಡ, ಕಾರ್ಗಿಲ್ ಯುದ್ಧದಲ್ಲಿ 60 ಗಂಟೆಕಾಲ ಸಂಕಷ್ಟ ಅನುಭವಿಸಿ, 21 ತಿಂಗಳ ಕಾಲ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆದು ತಾಯ್ನಾಡಿಗೆ ಮರಳಿದ ಕ್ಯಾಪ್ಟನ್ ನವೀನ್ ನಾಗಪ್ಪ, ರಂಗಭೂಮಿ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಹೆಸರುವಾಸಿಯಾದ, ನಾಟಕ ನಿರ್ದೇಶನ ಮಾಡಿರುವ ಪ್ರಕಾಶ್ ಬೆಳವಾಡಿ, ಮೀನುಗಾರರ ನಾಯಕ, ಮಾಜಿ ಶಾಸಕ ಮಂಗಳೂರಿನ ಬೈಕಂಪಾಡಿ ರಾಮಚಂದ್ರ ಹಾಗೂ ಕಿಮ್ಸ್ ಮೆಡಿಕಲ್ ಕಾಲೇಜು ನಿರ್ದೇಶಕ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಎಮ್‍ಕೆ.ಸುದರ್ಶನ್, ಅದಮ್ಯ ಚೀತನದ ಸಂಸ್ಥಾಪಕಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಪ್ರಶಸ್ತಿ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X