ಸಿಂದಗಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರದಿಂದ ದಾಳಿ; ಆರೋಪ

ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ
ವಿಜಯಪುರ: ಬಿಜೆಪಿ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾರೆನ್ನಲಾದ ಘಟನೆ ಸಿಂದಗಿ ತಾಲೂಕಿನ ನಾಗಾವಿ ಬಿ.ಕೆ ಗ್ರಾಮದಲ್ಲಿ ನಡೆದಿದೆ.
ಗುರುಗೌಡ ಬಿರಾದಾರ ಎಂಬವರೇ ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತನಾಗಿದ್ದು, ನೀರು ಬಿಡಲು ಹೊಳಕ್ಕೆ ತೆರಳಿದ್ದಾಗ ದುಷ್ಕರ್ಮಿಗಳು ಹಲ್ಲೆಗೈದು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಗೊಳಗಾದ ಗುರುಗೌಡ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story





