Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ನಡಿಗಾಸ್ ಫೆಡರೇಷನ್ ವತಿಯಿಂದ 'ಪುನೀತ...

ಕನ್ನಡಿಗಾಸ್ ಫೆಡರೇಷನ್ ವತಿಯಿಂದ 'ಪುನೀತ ನೆನಪು' ಅಪ್ಪು ನುಡಿನಮನ ಕಾರ್ಯಕ್ರಮ

ಹಿರಿಯ ನಟ ದ್ವಾರಕೀಶ್, ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ್ ಭಾಗಿ

ವಾರ್ತಾಭಾರತಿವಾರ್ತಾಭಾರತಿ2 Nov 2021 7:50 PM IST
share
ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಪುನೀತ ನೆನಪು ಅಪ್ಪು ನುಡಿನಮನ ಕಾರ್ಯಕ್ರಮ

ಅ.29ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ 'ಪುನೀತ ನೆನಪು' ಎಂಬ ನುಡಿನಮನ ಕಾರ್ಯಕ್ರಮವನ್ನು  ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು.

ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ್ಲಿ ನೆಲೆಸಿರುವ 38ಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅಪ್ಪು ಅಭಿಮಾನಿಗಳು ತಮ್ಮನ್ನಗಲಿದ ನೆಚ್ಚಿನ ನಟನ ಜೊತೆ ತಮಗಿದ್ದ ಒಡನಾಟ, ಪ್ರೀತಿ, ಅಭಿಮಾನವನ್ನು ಮುಕ್ತವಾಗಿ ಹಂಚಿಕೊಂಡು ನುಡಿನಮನ ಸಲ್ಲಿಸಿದರು.

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ರವರು ಪಾಲ್ಗೊಂಡು, 'ನನ್ನ ಸ್ವಂತ ಮಗನನ್ನು ಕಳೆದುಕೊಂಡಷ್ಟು ದುಃಖವಾಗಿದೆ' ಎಂದು ಅಪ್ಪು ಜೊತೆಗಿನ ಹಲವು ನೆನಪುಗಳನ್ನು ಹಂಚಿಕೊಂಡರು. ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ್ ಮಾತನಾಡಿ ಅಪ್ಪು ಜೊತೆಗಿನ ಸವಿನಯ ಸಂಬಂಧ ಹಾಗೂ ಅವರ ಜೊತೆ ಕೊನೆಯ ಭೇಟಿ ಸಂದರ್ಭದ ಘಟನೆಯನ್ನು ನೆನಪಿಸಿಕೊಂಡು, ಭಾವುಕರಾಗಿ ಶ್ರದ್ಧಾಂಜಲಿ ಅರ್ಪಿಸಿದರು. ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹಾರಿಸ್ ಮಾತನಾಡಿ ಪುನೀತ್ ರಾಜಕುಮಾರ್ ಜೀವನದಲ್ಲಿ ಅಳವಡಿಸಿದ್ದ ಸರಳತೆಯ ಕುರಿತು ನೆನಪಿನಂಗಳದಿಂದ ಹಲವು ಘಟನೆಗಳನ್ನು ಸ್ಮರಿಸಿದರು.

ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅಪ್ಪು ಅವರ ಮೊದಲ ಭೇಟಿಯಲ್ಲೇ ತೋರಿದ ವಿನಯ ಮತ್ತು ಪ್ರೀತಿಯ ಅನುಭವವನ್ನು ಮಾತಿನಲ್ಲಿ ಹಂಚಿಕೊಂಡರು. ಮಂಗಳೂರು ಸಿಟಿ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ನಟರಾಜ್ ರವರು ಮಾತನಾಡಿ ಪುನೀತ್ ಜೀವನದಲ್ಲಿ ಅಳವಡಿಸಿಕೊಂಡ ಆದರ್ಶಗಳನ್ನು ಹಲವು ನೆನಪುಗಳ ಸಹಿತ ಮೆಲುಕು ಹಾಕಿದರು. ದುಬೈನ ಉದಯೋನ್ಮುಖ ಗಾಯಕ ಉಮರ್ ಸೈಫ್ ರವರು ಪುನೀತ್ ರಾಜಕುಮಾರ್ ರವರ 'ಬೊಂಬೆ ಹೇಳುತೈತೆ' 'ನಿನ್ನಿಂದಲೇ' ಹಾಡನ್ನು ಮನಮುಟ್ಟುವಂತೆ ಹಾಡಿದಾಗ ನೆರೆದಿದ್ದ ಅಭಿಮಾನಿಗಳೆಲ್ಲರೂ ಅಪ್ಪು ನೆನೆದು ಗದ್ಗದಿತರಾದರು.

ಕಾರ್ಯಕ್ರಮದ ಸಂಘಟಕ, ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್ ಮಾತನಾಡಿ ನಮ್ಮ ಜೀವನದಲ್ಲಿ ಪುನೀತ್ ರವರಂತಹ ಸರಳತೆ, ಪ್ರಚಾರ ಬಯಸದೇ ನೆರವಾಗುವ ಗುಣವನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸೋಣ, ಆ ಮೂಲಕ ನಿಜಾರ್ಥದಲ್ಲಿ ಶ್ರದ್ಧಾಂಜಲಿ ಅರ್ಪಿಸೋಣ ಎಂದರು.

ಈ ಸಂದರ್ಭದಲ್ಲಿ ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಪುನೀತ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ವೀಡಿಯೊ ಹಾಗೂ ಕಳೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಂದು ಪುನೀತ್  ಶುಭ ಹಾರೈಸಿದ್ದ ವೀಡಿಯೊ ಸಂದೇಶವನ್ನು ಪ್ರದರ್ಶಿಸಲಾಯಿತು.

ಬಹರೈನ್ ಕನ್ನಡ ಸಂಘ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಅಬುಧಾಬಿ ಕರ್ನಾಟಕ ಸಂಘ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಹಾಲೆಂಡ್ ಕನ್ನಡ ಸಂಘದ ಅಶೋಕ್, ಕನ್ನಡ ಸಂಘ ಉಗಾಂಡ ಅಧ್ಯಕ್ಷರಾದ ಸುಧೀರ್, ಬ್ಯಾಂಕಾಕ್ ಕನ್ನಡ ಸಂಘದ ಶಿವು ಪೂಜಾರಿ, ಇಟಲಿ ಕನ್ನಡ ಸಂಘದ ಅಧ್ಯಕ್ಷರಾದ ಹೇಮೇಗೌಡ, ಕನ್ನಡಿಗರು ದುಬೈ ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಕನ್ನಡ ಮಿತ್ರರು ಯುಎಇ ಅಧ್ಯಕ್ಷ ಶಶಿಧರ ನಾಗರಾಜಪ್ಪ, ನಮ್ಮ ರೇಡಿಯೋ ಸ್ಥಾಪಕ ಅವನಿಧಾರ್ ಹವಾಲ್ದಾರ್, ಓವರ್ಸೀಸ್ ಕನ್ನಡ ಮೂವೀಸ್ ನ ದೀಪಕ್ ಸೋಮಶೇಖರ್ ಪುನೀತ್ ರಾಜಕುಮಾರ್ ರವರಿಗೆ ನುಡಿನಮನ ಸಲ್ಲಿಸಿದರು.

ದ್ವಾರಕೀಶ್ ಅವರ ಪುತ್ರ ಸುಕೇಶ್ ದ್ವಾರಕೀಶ್, ಬಾ. ಮಮತಾ ರಡಾರ್, ಕೆಎನ್ಆರೈ ಫೋರಂ ಯುಎಇ ಸದಸ್ಯರಾದ ದಯಾ ಕಿರೋಡಿಯನ್, ಮಂಗಳೂರಿನ ಖ್ಯಾತ ರೇಡಿಯೋ ಜಾಕಿ ಆರ್.ಜೆ ಎರೋಲ್, ಲಕ್ಷ್ಮೀ ಲಿಂಗದಳ್ಳಿ, ವಡೆಕಾರ್ ಅಬುಧಾಬಿ, ಕನ್ನಡ ಮಿತ್ರರು ತಂಡದ ನಾಗರಾಜ್ ರಾವ್, ಕನ್ನಡಿಗಾಸ್ ಫೆಡರೇಷನ್ ನ ಇಮ್ರಾನ್ ಖಾನ್ ಎರ್ಮಾಳ್, ಸೆಂಥಿಲ್ ಬೆಂಗಳೂರು, ಅನ್ಸಾರ್ ಬಾರ್ಕೂರ್, ಸಮೀರ್ ಉದ್ಯಾವರ್ ಪ್ರೀತಿಯ ಅಪ್ಪು ರವರಿಗೆ ಅಭಿಮಾನದಿಂದ ನುಡಿನಮನ ಸಲ್ಲಿಸಿದರು.

ಕಾರ್ಯಕ್ರಮವನ್ನು ವಿಷ್ಣುಮೂರ್ತಿ ಮೈಸೂರು ನಿರೂಪಿಸಿದರು ಹಾಗೂ ಪುನೀತ್ ಗೆ ಇಷ್ಟವಾದ ಭಕ್ತಿಗೀತೆಯನ್ನೂ ಹಾಡಿದರು, ಮಮತಾ ಶಾರ್ಜಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X