Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಬಿಜೆಪಿ ಸರಕಾರದ ಅವನತಿ...

ರಾಜ್ಯ ಬಿಜೆಪಿ ಸರಕಾರದ ಅವನತಿ ಆರಂಭವಾಗಿದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 Nov 2021 8:12 PM IST
share
ರಾಜ್ಯ ಬಿಜೆಪಿ ಸರಕಾರದ ಅವನತಿ ಆರಂಭವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ನ.2: ರಾಜ್ಯ ಬಿಜೆಪಿ ಸರಕಾರದ ಅವನತಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬಿಜೆಪಿ ಸರಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಹಾಗಾಗಿ ಈ ಸರಕಾರದ ಆಡಳಿತದ ವಿರುದ್ಧದ ಅಲೆ ಆರಂಭಗೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಮಯ್ಯ ಹೇಳಿದರು.

ಮಂಗಳವಾರ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಮುಂದಿನ ಬಾರಿ ಪಕ್ಷದಿಂದ ತಾನು ಮುಖ್ಯಮಂತ್ರಿ ಆಗಬೇಕು ಎಂದು ಪಕ್ಷದ ಯಾವ ನಾಯಕರು ಬೇಕಾದರೂ ಕೇಳಬಹುದು. ಅದರಲ್ಲಿ ಯಾವ ತಪ್ಪಿಲ್ಲ. ಆದರೆ ಪಕ್ಷದ ಹೆಚ್ಚಿನ ಶಾಸಕರ ಅಭಿಪ್ರಾಯ ಮತ್ತು ಹೈಕಮಾಂಡ್ ತೀರ್ಮಾನ ಅಂತಿಮವಾಗಲಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾನಗಲ್‍ನ ಪಕ್ಕದ ಕ್ಷೇತ್ರದವರು. ಮುಖ್ಯಮಂತ್ರಿಯ ತವರು ಜಿಲ್ಲೆಯಲ್ಲೆ ಬಿಜೆಪಿ ಸೋತಿದೆ. ಹಾನಗಲ್‍ನಲ್ಲಿ ಪ್ರಚಾರದ ವೇಳೆ ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಮಣ್ಣಾಗುತ್ತೇನೆ, ನಾನು ಅಕ್ಕಿಆಲೂರಿನ ಅಳಿಯ ಎಂದೆಲ್ಲಾ ಭಾವನಾತ್ಮಕವಾಗಿ ಮಾತನಾಡಿದರೂ ಕೂಡ ಜನರು ಅವರ ಮಾತಿಗೆ ಮರುಳಾಗದೆ ನಮ್ಮ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. 

ಯಡಿಯೂರಪ್ಪ ಮತ್ತು ಅವರ ಮಗ ಎರಡೂ ಕಡೆಗಳಲ್ಲಿ ಕ್ರಿಯಾಶೀಲರಾಗಿ ಪ್ರಚಾರ ಮಾಡಿದರು. ಮುಖ್ಯಮಂತ್ರಿ, ಸಚಿವರು ಚುನಾವಣೆ ನಡೆಯುವ ಕ್ಷೇತ್ರದಲ್ಲೇ ಬೀಡುಬಿಟ್ಟಿದ್ದರು, ಇಷ್ಟೆಲ್ಲದರ ಹೊರತಾಗಿಯೂ ಜನ ಬಿಜೆಪಿಗೆ ಮತ ನೀಡದೆ, ಕಾಂಗ್ರೆಸ್‍ಗೆ ಮತ ನೀಡುವ ಮೂಲಕ ಬದಲಾವಣೆ ಬಯಸಿದ್ದಾರೆ ಎಂದು ಅವರು ತಿಳಿಸಿದರು.

ಯಡಿಯೂರಪ್ಪ ಅವರೇ ಅಧಿಕಾರದಲ್ಲಿ ಇದ್ದಿದ್ದರೂ ಫಲಿತಾಂಶ ಹೀಗೆ ಇರುತ್ತಿತ್ತು. ಸಿಂದಗಿಯಲ್ಲಿ ಜೆಡಿಎಸ್ ನಿಂದ ಬಂದ ಕಾರ್ಯಕರ್ತರು ಮತ್ತು ಕಾಂಗ್ರೆಸ್‍ನ ಕಾರ್ಯಕರ್ತರ ನಡುವೆ ಹೊಂದಾಣಿಕೆ ಕೊರತೆಯಾಗಿದ್ದು ಸೋಲಿಗೆ ಕಾರಣವಾಗಿರಬಹುದು ಎಂಬ ಅನುಮಾನವಿದೆ. ಈ ಬಗ್ಗೆ ಪೂರ್ಣ ಮಾಹಿತಿ ಬಂದ ನಂತರ ಗೊತ್ತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. 

ಹಾನಗಲ್‍ನಲ್ಲಿ ಜೆಡಿಎಸ್ ಪಕ್ಷ ನಾಲ್ಕಂಕಿ ಮತಗಳನ್ನು ಪಡೆಯದೆ, ಠೇವಣಿ ಕಳೆದುಕೊಂಡಿದೆ. ದೇವೇಗೌಡರು ಹತ್ತು ದಿನ ಹಾನಗಲ್ ಮತ್ತು ಸಿಂದಗಿಯಲ್ಲಿ ಪ್ರಚಾರ ಮಾಡಿದರು. ಮಾಜಿ ಪ್ರಧಾನಿಗಳು ಅವರು, ಅನುಭವ ಹೆಚ್ಚಿದೆ. ಅವರ ಪಕ್ಷದ ಸೋಲಿಗೆ ಏನು ಕಾರಣ ಎಂದು ಅವರನ್ನೇ ಕೇಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಜೆಡಿಎಸ್‍ನಿಂದ ಬಂದ ಝಮೀರ್ ಅಹ್ಮದ್, ಅಖಂಡ ಶ್ರೀನಿವಾಸಮೂರ್ತಿ, ಭೀಮಾ ನಾಯಕ್ ಗೆದ್ದಿದ್ದಾರೆ. ನಾನು ಕೂಡ ಜೆಡಿಎಸ್‍ನಿಂದ ಕಾಂಗ್ರೆಸ್ ಸೇರಿ ಗೆದ್ದಿದ್ದೇನೆ. ಜೆಡಿಎಸ್‍ನಿಂದ ಬಂದ ಮತ್ತು ಕಾಂಗ್ರೆಸ್‍ನ ಹಳೆಯ ಕಾರ್ಯಕರ್ತರ ನಡುವೆ ಎಲ್ಲ ಕಡೆ ಹೊಂದಾಣಿಕೆ ಕೊರತೆ ಆಗುವುದಿಲ್ಲ, ಕೆಲವೊಂದು ಕ್ಷೇತ್ರದಲ್ಲಿ ಹೊಂದಾಣಿಕೆಯಲ್ಲಿ ಹೆಚ್ಚು ಕಡಿಮೆ ಆಗುತ್ತೆ, ಅದನ್ನು ಮುಂದೆ ಸರಿಪಡಿಸಬಹುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಅಲ್ಪಸಂಖ್ಯಾತ ಬಂಧುಗಳು ಹಿಂದೆಯೂ ಜೆಡಿಎಸ್‍ನ ನಂಬಿಲ್ಲ, ಮುಂದೆಯೂ ನಂಬಲ್ಲ. ಜೆಡಿಎಸ್ ಒಂದು ಅವಕಾಶವಾದಿ ಪಕ್ಷ ಎಂಬುದು ಅವರಿಗೆ ಗೊತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬಿಟ್ ಕಾಯಿನ್ ಪ್ರಕರಣ: ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕೃಷ್ಣ ಎಂಬುವವರನ್ನು ಬಂಧಿಸಲಾಗಿತ್ತು. ಆತನ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆ, ಸಾಕ್ಷಿಗಳನ್ನು ಸಂಗ್ರಹಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ರಾಜಕೀಯ ನಾಯಕರ ಹೆಸರನ್ನು ಮುಖ್ಯಮಂತ್ರಿಗಳೇ ಬಹಿರಂಗಪಡಿಸಲಿ. ಅವರು ಕಾಂಗ್ರೆಸ್‍ನವರಾದರೂ ಸರಿ, ಬಿಜೆಪಿಯವರಾದರೂ ಸರಿ. ಜನರಿಗೆ ಸತ್ಯ ಗೊತ್ತಾಗಲಿ ಎಂದು ಸಿದ್ದರಾಮಯ್ಯ ಹೇಳಿದರು.

ನಾನು ತನಿಖಾ ಸಂಸ್ಥೆಗೆ ಸಾಕ್ಷಿ ಕೊಡುವುದಾದರೆ ತನಿಖೆ ಯಾಕೆ ಬೇಕು? ಪ್ರಕರಣದಲ್ಲಿ ರಾಜಕೀಯ ನಾಯಕರು ಭಾಗಿಯಾದ ಬಗ್ಗೆ ನನಗೆ ಮಾಹಿತಿ ಇದೆ ಅಷ್ಟೇ. ಕಾನೂನು ಬಾಹಿರ ಕೃತ್ಯವೊಂದು ನಡೆಯದೆ ಹೋಗಿದ್ದರೆ ಬಸವರಾಜ ಬೊಮ್ಮಾಯಿ ಪ್ರಕರಣವನ್ನು ಈಡಿಗೆ ಯಾಕೆ ವಹಿಸಿದ್ದು? ತನಿಖೆ ಯಾಕೆ ಮಾಡುತ್ತಿರೋದು? ಎಂದು ಅವರು ಪ್ರಶ್ನಿಸಿದರು.

ಬೆಳಗಾವಿಯಲ್ಲಿ ಅಧಿವೇಶನ: ನವೆಂಬರ್ ತಿಂಗಳಿನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವಂತೆ ನಾನು ಸರಕಾರವನ್ನು ಒತ್ತಾಯ ಮಾಡಿದ್ದೇನೆ. ಕಳೆದ ಮೂರು ವರ್ಷದಲ್ಲಿ ಒಂದು ಬಾರಿಯೂ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಚರ್ಚೆಯಾಗಬೇಕು ಎಂಬ ಉದ್ದೇಶದಿಂದಲೆ ಸುವರ್ಣಸೌಧ ಕಟ್ಟಿದ್ದು. ಉತ್ತರ ಕರ್ನಾಟಕದ ಬಗ್ಗೆ ಬಹಳ ಮಾತನಾಡುವ ಬಿಜೆಪಿಯವರು ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮನಸಿದ್ದರೆ ಬೆಳಗಾವಿಯಲ್ಲೇ ಅಧಿವೇಶನ ಕರೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X