ನ.4ಕ್ಕೆ ನ್ಯುಮೊಕೋಕಲ್ ಲಸಿಕೆಗೆ ಚಾಲನೆ
ಉಡುಪಿ, ನ.2: ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಒಂದೂವರೆ ತಿಂಗಳ ಶಿಶುಗಳಿಗೆ ಪೆಂಟಾ1, ಐಪಿವಿ1, ಒಪಿವಿ1, ರೋಟಾ 1ರ ಜೊತೆಗೆ ನ್ಯುಮೊಕೋಕಲ್ ಲಸಿಕೆಯ ಚಾಲನಾ ಕಾರ್ಯಕ್ರಮವನ್ನು ನವೆಂಬರ್ 4ರಂದು ಬೆಳಗ್ಗೆ 10 ಗಂಟೆಗೆ ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಲಸಿಕಾ ಕಾರ್ಯ ಪಡೆಯ ಅಧ್ಯಕ್ಷರು ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story