ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ
ಉಡುಪಿ, ನ.2: ಪಿಯುಸಿ ಎರಡನೇ ವರ್ಷ ಹಾಗೂ ಡಿಪ್ಲೋಮಾ ಮೂರನೇ ವರ್ಷದಲ್ಲಿ ಶೇ.60 ಅಂಕ ಪಡೆದು ಪ್ರಸ್ತುತ ಸಾಲಿನ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸ ಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ -www.ksb.gov.in - ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





