ಸತತ ಏಳನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ

ಹೊಸದಿಲ್ಲಿ,ನ.2: ಸತತ ಏಳನೇ ದಿನವಾದ ಮಂಗಳವಾರವೂ ದೇಶಾದ್ಯಂತ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಲಾಗಿದೆ. ಆದರೆ ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ರಾಜಧಾನಿ ದಿಲ್ಲಿಯಲ್ಲಿ ಪ್ರತಿ ಲೀ.ಪೆಟ್ರೋಲ್‌ಗೆ 35 ಪೈಸೆ ಹೆಚ್ಚಿಸಲಾಗಿದ್ದು,ಅದೀಗ 110.04 ರೂ.ಗೆ ತಲುಪಿದೆ. ಡೀಸೆಲ್ ಪ್ರತಿ ಲೀ.ಗೆ 98.42 ರೂ.ಗೆ ಮಾರಾಟವಾಗುತ್ತಿದೆ.
ಅತ್ತ ಮುಂಬೈನಲ್ಲಿ ಮಂಗಳವಾರ ಪೆಟ್ರೋಲ್ ಬೆಲೆ ಪ್ರತಿ ಲೀ.ಗೆ 115.85 ರೂ.ಗೇರಿದ್ದರೆ ಡೀಸೆಲ್ ಬೆಲೆ ಪ್ರತಿ ಲೀ.ಗೆ 106.62 ರೂ.ಗಳಲ್ಲಿ ಸ್ಥಿರವಾಗಿತ್ತು.
Next Story