ಚಾಮರಾಜನಗರ: 'ಹೊಟ್ಟೆಪಾಡಿಗೆ ದಲಿತರು ಬಿಜೆಪಿಯಲ್ಲಿ ಇದ್ದಾರೆ' ಎಂಬ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಾಮರಾಜನಗರ: ನ.3: ‘ದಲಿತರು ಬಿಜೆಪಿಗೆ ಹೊಟ್ಟೆಪಾಡಿಗಾಗಿ ಹೋಗಿದ್ದಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಜಿಲ್ಲಾ ಎಸ್ಸಿ ಎಸ್ಟಿ ಮೋರ್ಚಾ ನೇತೃತ್ವದಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ, ರಾಷ್ಟ್ರೀಯ ಹೆದ್ದಾರಿ ತಡೆದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಲಿತರ ಕುರಿತು ಆಕ್ಷೇಪಕಾರಿ ಹೇಳಿಕೆ ನೀಡಿದ ಸಿದ್ದರಾಮಯ್ಯ ಸಾರ್ವಜನಿಕರ ಮತ್ತು ಬಿಜೆಪಿಯ ಕ್ಷಮೆ ಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
Next Story





