ರಾಜ್ಯದ ಮನೆ ಮನೆಗಳಲ್ಲಿ ಕನ್ನಡದ ಬಳಕೆ ಆಗಬೇಕು: ಸಚಿವ ಸುನೀಲ್

ಉಡುಪಿ, ನ.3: ರಾಜ್ಯದ ಮನೆ ಮನೆಗಳಲ್ಲಿ ಕನ್ನಡದ ಬಳಕೆ ಆಗಬೇಕು, ಮಕ್ಕಳಿಗೆ ಕನ್ನಡ ಭಾವಗೀತೆಗಳನ್ನು ಕೇಳಿಸಬೇಕು. ಕುಟುಂಬ ಸದಸ್ಯರೊಂದಿಗೆ ಕನ್ನಡದಲ್ಲಿ ಮಾತನಾಡಬೇಕು, ಕನ್ನಡ ಬಳಕೆಯ ಮಧ್ಯದಲ್ಲಿ ಅನ್ಯಭಾಷೆಯ ಪ್ರಯೋಗ ಸಲ್ಲದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಪ್ರಸ್ತುತಿ ಪಡಿಸಿದ ಕನ್ನಡಕ್ಕಾಗಿ ನಾವು ಒಂದು ಅಪೂರ್ವ ಅಭಿಯಾನ- ಗೀತ ಗಾಯನದ ವಿಡಿಯೋ ಆಲ್ಬಮ್ ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ.ನವೀನ್ ಭಟ್ ವೈ, ಅಪಾರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಸ್ಪಿ ವಿಷ್ಣುವರ್ಧನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಜಿಲ್ಲಾಧ್ಯಕ್ಷ ಕರಂದಾಡಿ ಶ್ರೀಧರ್ ಶೆಟ್ಟಿಗಾರ್, ಕೆ.ವಾಸುದೇವ ರಾವ್, ವಲಯಾಧ್ಯಕ್ಷ ಜನಾರ್ದನ್ ಕೊಡವೂರು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕೊರೆಯ, ಕಾರ್ಯಕ್ರಮ ಸಂಚಾಲಕ ಪ್ರವೀಣ್ ಹೂಡೆ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಕೊಡಂಕೂರ್, ಕಾರ್ಯದರ್ಶಿ ಸುಕೇಶ್ ಅಮೀನ್ ಉಪಸ್ಥಿತರಿದ್ದರು.







