Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಬಿಟ್ ಕಾಯಿನ್ ಹಗರಣ’: ಈ.ಡಿ ತನಿಖೆಗೆ...

‘ಬಿಟ್ ಕಾಯಿನ್ ಹಗರಣ’: ಈ.ಡಿ ತನಿಖೆಗೆ ವಹಿಸಲು ರಾಜ್ಯ ಸರಕಾರ ಬರೆದಿರುವ ಪತ್ರ ಬಿಡುಗಡೆ ಮಾಡಲಿ; ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ3 Nov 2021 7:19 PM IST
share
‘ಬಿಟ್ ಕಾಯಿನ್ ಹಗರಣ’: ಈ.ಡಿ ತನಿಖೆಗೆ ವಹಿಸಲು ರಾಜ್ಯ ಸರಕಾರ ಬರೆದಿರುವ ಪತ್ರ ಬಿಡುಗಡೆ ಮಾಡಲಿ; ಡಿ.ಕೆ.ಶಿವಕುಮಾರ್

ಬೆಂಗಳೂರು, ನ.3: ಅಂತರ್‍ರಾಷ್ಟ್ರೀಯ ಮಟ್ಟದ ಬಿಟ್ ಕಾಯಿನ್ ಹಗರಣ ರಾಜ್ಯ ಸರಕಾರದ ವ್ಯಾಪ್ತಿಯಲ್ಲಿದ್ದು, ಪ್ರಕರಣದ ತನಿಖೆಗೆ ಈ.ಡಿಗೆ ಬರೆದಿರುವ ಪತ್ರವನ್ನು ಬಹರಂಗಪಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ‘ರಾಜ್ಯ ಸರಕಾರ ಈ ಪ್ರಕರಣ ಕುರಿತು ಆರೋಪಪಟ್ಟಿ ಸಲ್ಲಿಸಿರುವುದಾಗಿ ಹೇಳಿದೆ. ಆರೋಪ ಪಟ್ಟಿ ಸಲ್ಲಿಸಿದ್ದರೆ, ಈ ಪ್ರಕರಣದ ತನಿಖೆಯನ್ನು ಈ.ಡಿಗೆ ನೀಡುವ ಅಗತ್ಯ ಏನಿತ್ತು?’ ಎಂದು ಪ್ರಶ್ನಿಸಿದರು.

ಬಿಟ್ ಕಾಯಿನ್ ವಿಚಾರವಾಗಿ ಸರಕಾರ ಗೊಂದಲದ ಹೇಳಿಕೆ ನೀಡುತ್ತಿದೆ. ವಿರೋಧ ಪಕ್ಷವಾಗಿ ನೀವು ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಮಾಧ್ಯಮಗಳು ಪ್ರಸ್ತಾಪಿಸಿದಾಗ, ‘ಈ ಪ್ರಕರಣವನ್ನು ಈ.ಡಿ ತನಿಖೆಗೆ ನೀಡಲಾಗಿದೆ ಎಂದು ಸಿಎಂ ಹೇಳಿಕೆ ಕೊಟ್ಟಿದ್ದನ್ನು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ರಾಜ್ಯ ಸರಕಾರ ಈ ಪ್ರಕರಣದ ತನಿಖೆ ಮಾಡುವಂತೆ ತನಿಖಾ ಸಂಸ್ಥೆಗೆ ಬರೆದಿರುವ ಪತ್ರವನ್ನು ಬಹಿರಂಗಪಡಿಸಲಿ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಹೇಳಿದ ಮಾತ್ರಕ್ಕೆ ನಂಬಲು ಸಾಧ್ಯವಿಲ್ಲ. ಅವರು ದಾಖಲೆ ಬಿಡುಗಡೆ ಮಾಡಲಿ. ಜತೆಗೆ ಈ ಪ್ರಕರಣದ ಬಗ್ಗೆ ಈ ಹಿಂದೆ ಯಾವ ತನಿಖಾ ಸಂಸ್ಥೆ ತನಿಖೆ ಮಾಡಿತ್ತು, ಯಾವ ಹಂತದಲ್ಲಿ ತನಿಖೆ ಇತ್ತು, ಯಾರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು, ಎಷ್ಟು ಜನರನ್ನು ಬಂಧಿಸಲಾಗಿದೆ, ತನಿಖೆ ಮಾಡಿದ ಅಧಿಕಾರಿಗಳು ಯಾರು? ಯಾವ ವರದಿ ನೀಡಲಾಗಿತ್ತು, ಆ ತನಿಖೆಯಲ್ಲಿ ಸಿಕ್ಕ ಮಾಹಿತಿ ಏನು? ಯಾರು ಯಾರು ಭಾಗಿಯಾಗಿದ್ದಾರೆ ಎಂಬ ದಾಖಲೆಗಳನ್ನು ಸಿಎಂ ಬಿಡುಗಡೆ ಮಾಡಲಿ ಎಂದು ಶಿವಕುಮಾರ್ ಆಗ್ರಹಿಸಿದರು.

ಈ ಬಿಟ್ ಕಾಯಿನ್ ಅಂದರೆ ಏನು, ಇದರ ಮಾಲಕರು ಯಾರು, ಯಾವ ಕಾಯ್ದೆ, ಸೆಕ್ಷನ್ ಅಡಿ ಪ್ರಕರಣವನ್ನು ತನಿಖಾ ಸಂಸ್ಥೆಗೆ ನೀಡಲಾಗಿದೆ? ಎಂಬ ಮಾಹಿತಿ ನೀಡಲಿ. ಈ ಪ್ರಕರಣದ ಬಗ್ಗೆ ಆರೋಪಪಟ್ಟಿ ಸಲ್ಲಿಸಿದ್ದೇವೆ ಎಂದು ಹೇಳುತ್ತಾರೆ. ಆರೋಪಪಟ್ಟಿ ಸಲ್ಲಿಸಿದ ಮೇಲೆ ಈ.ಡಿ.ಗೆ ಯಾಕೆ ಹೋಗಬೇಕು? ಹೀಗಾಗಿ ಈ ಬಗ್ಗೆ ಜನರಿಗೆ ಸ್ಪಷ್ಟ ಚಿತ್ರಣ ನೀಡಬೇಕು. ಯಾರು ಡ್ರಗ್‍ನಲ್ಲಿ, ಬಿಟ್ ಕಾಯಿನ್‍ನಲ್ಲಿ ಈಜಿದ್ದಾರೋ ಗೊತ್ತಿಲ್ಲ ಎಂದು ಅವರು ಹೇಳಿದರು.

ರಾಜ್ಯ ಸರಕಾರದ ವ್ಯಾಪ್ತಿಯಲ್ಲಿ ಈ ಪ್ರಕರಣ ಇರುವುದರಿಂದ ಈ ಕುರಿತ ಮಾಹಿತಿಯನ್ನು ಸರಕಾರವೇ ನೀಡಬೇಕು. ವಿರೋಧ ಪಕ್ಷದ ಕೆಲಸ ತನಿಖೆ ಮಾಡಿ ಎಂದು ಆಗ್ರಹಿಸುವುದಾಗಿದೆ. ಮೊದಲು ಅವರು ತನಿಖೆಗೆ ಕೊಟ್ಟಿರುವ ವಿವರಗಳನ್ನು ಬಹಿರಂಗಪಡಿಸಲಿ, ಆಮೇಲೆ ವಿರೋಧ ಪಕ್ಷವಾಗಿ ಏನು ಮಾಡಬೇಕು ಎಂದು ನಮಗೆ ಗೊತ್ತಿದೆ ಎಂದು ಶಿವಕುಮಾರ್ ತಿಳಿಸಿದರು. 

2018ರಲ್ಲಿ ಈ ಪ್ರಕರಣ ದಾಖಲಾಗಿದ್ದು, ಆಗ ಯಾರು ಮುಖ್ಯಮಂತ್ರಿಗಳಿದ್ದರು, ಆಗ ಶಿವಕುಮಾರ್ ಯಾವ ಸಚಿವರಾಗಿದ್ದರು ಎಂದು ಬಿಜೆಪಿ ನಾಯಕರು ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, 'ಅವರು ನನ್ನ ಹೆಸರು ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ನನ್ನ ಹೇಸರನ್ನೂ ಸೇರಿಸಿ ತನಿಖೆಗೆ ಆದೇಶಿಸಲಿ ಎಂದರು.

ನಾನು ತಪ್ಪು ಮಾಡಿದ್ದರೆ ನನ್ನ ತನಿಖೆಯೂ ಆಗಬೇಕಲ್ಲವೇ? ನನ್ನ ಮೇಲೆ ಕೇಸ್ ದಾಖಲಿಸುವಾಗ ಆದಾಯ ಇಲಾಖೆ ಪತ್ರ ಪಡೆದು, ಜಾರಿ ನಿರ್ದೇಶನಾಲಯದ ಮಾಹಿತಿ ಪಡೆದು ನಂತರ ಸಿಬಿಐಗೆ ಸರಕಾರ ಪ್ರಕರಣವನ್ನು ವಹಿಸಿತ್ತು. ಅದೇ ರೀತಿ ಈಗಲೂ ಈ.ಡಿ.ಗೆ ತನಿಖೆಗೆ ಆದೇಶಿಸಿರುವ ಪತ್ರ ಅಥವಾ ದಾಖಲೆ ನೀಡಲಿ ಎಂದು ಅವರು ಒತ್ತಾಯಿಸಿದರು.

ಕಾಂಗ್ರೆಸ್ ಕೇವಲ ಆರೋಪ ಮಾಡುತ್ತಿದ್ದು, ಯಾರ ಹೆಸರನ್ನೂ ಸ್ಪಷ್ಟವಾಗಿ ಹೇಳುತ್ತಿಲ್ಲ ಯಾಕೆ? ಎಂದು ಕೇಳಿದಾಗ, ‘ನಾನು ಯಾವುದೇ ಆರೋಪ ಮಾಡುತ್ತಿಲ್ಲ. ಕೇವಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರ ನೀಡಬೇಕಿರುವ ಮಾಹಿತಿ ಬಹಿರಂಗ ಪಡಿಸುವಂತೆ ಆಗ್ರಹಿಸುತ್ತಿದ್ದೇನೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X