Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : ನಾಡಿನ ಜನತೆಗೆ ಉಡುಪಿಯ...

ಉಡುಪಿ : ನಾಡಿನ ಜನತೆಗೆ ಉಡುಪಿಯ ಬಿಷಪ್‌ರಿಂದ ದೀಪಾವಳಿ ಸಂದೇಶ

ವಾರ್ತಾಭಾರತಿವಾರ್ತಾಭಾರತಿ3 Nov 2021 7:49 PM IST
share
ಉಡುಪಿ : ನಾಡಿನ ಜನತೆಗೆ ಉಡುಪಿಯ ಬಿಷಪ್‌ರಿಂದ ದೀಪಾವಳಿ ಸಂದೇಶ

ಉಡುಪಿ, ನ.3: ಮಾನವ ಸಂಬಂಧಗಳನ್ನು ಬೆಳಗಿಸುವ, ಗಾಢಗೊಳಿಸುವ ದೀಪಾವಳಿ ಮತ್ತೊಮ್ಮೆ ಬಂದಿದೆ. ಕೋವಿಡ್ ಸೋಂಕಿನ ಭೀತಿಯಿಂದ ಮುಕ್ತಗೊಳ್ಳುವ ಶುಭ ಸಮಯದಲ್ಲಿ ಇದು ಭರವಸೆಯ ದೀಪವನ್ನು ಬೆಳಗಿಸುವ ಹಬ್ಬವಾಗಿದೆ ಎಂದು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಜೆರಾಲ್ಡ್ ಲೋಬೊ ನಾಡಿನ ಜನತೆಗೆ ನೀಡಿದ ದೀಪಾವಳಿ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರತಿಯೊಬ್ಬ ಮಾನವನೂ ಒಂದು ದೀಪವೇ, ಪರರ ಬಾಳನ್ನು ಅರಳಿಸುವುದೇ ಅವನ ಜೀವನದ ಉದ್ದೇಶ. ದುಷ್ಟಶಕ್ತಿಯನ್ನು ನಾಶಪಡಿಸಿ ಒಳ್ಳೆಯತನವು ಜಯ ಸಾಧಿಸಿದ ಘಟನೆಗಳನ್ನು ಧ್ಯಾನಿಸುವುದರೊಂದಿಗೆ, ಎಲ್ಲರೂ ಸಂತೋಷದಿಂದ ಸಿಹಿತಿಂಡಿ ಹಂಚಿ ಸಂಭ್ರಮಪಡುವುದು ಸಾಮಾನ್ಯ. ಎಲ್ಲರ ಮನೆ ಮನಗಳಲ್ಲೂ ಗೆಳೆತನ, ಆತ್ಮೀಯತೆ, ಸಹೋದರತ್ವ ತುಂಬಿ ತುಳುಕುವಂತಾಗಬೇಕು ಎಂಬ ಆಶಯವೂ ಈ ಆಚರಣೆಯಲ್ಲಿದೆ. ಹೀಗಾಗಿ ದೀಪಾವಳಿ ಹಬ್ಬದಲ್ಲಿ ಸ್ವಾತಂತ್ರ, ಸಂಭ್ರಮ ಹಾಗೂ ಸಹೋದರತ್ವದ ಅಂಶಗಳು ಅಡಕವಾಗಿವೆ ಎಂದವರು ಸಂದೇಶದಲ್ಲಿ ವಿವರಿಸಿದ್ದಾರೆ.

ದೀಪಾವಳಿ ಹಬ್ಬವು ದುಷ್ಟತನದ ಮೇಲೆ ಒಳ್ಳೆಯತನದ ಗೆಲುವನ್ನು ಆಚರಿಸುತ್ತದೆ. ಯಾವಾಗ ಒಳ್ಳೆಯತನವು ಜಾಗೃತಗೊಂಡು ಸಂಘಟಿತವಾಗಿ ಕಾರ್ಯಪೃವೃತ್ತವಾಗುತ್ತದೋ, ಆಗ ದುಷ್ಟತೆಯ ಪ್ರಭಾವ ಕಡಿಮೆಯಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿ ತನ್ನಲ್ಲಿರುವ ಅಸುರೀ ಪೃವೃತ್ತಿ ಹಾಗೂ ದ್ವಂಸಕ ಪೃವೃತ್ತಿಯನ್ನು ಕಡಿಮೆ ಮಾಡಿ ದೈವೀಪ್ರವೃತ್ತಿಯನ್ನು ಸ್ಥಾಪಿಸಬೇಕು. ಕೆಟ್ಟತನವನ್ನು ಹಾಗೂ ಅಹಂಕಾರದ ಉಚ್ಛಾಟನೆಯನ್ನು ಮಾಡಿ ಆತ್ಮಜ್ಯೋತಿಯನ್ನು ಪ್ರಕಾಶಿಸಬೇಕು. ತಾನೇ ಉರಿದು ಜಗಕೆ ಬೆಳಕು ನೀಡುವ ಜ್ಯೋತಿಯನ್ನು ನೋಡುತ್ತಾ ಮನುಷ್ಯ ತನ್ನ ಸ್ವಾರ್ಥವನ್ನು ಮರೆತು, ತಾನೂ ಜ್ಯೋತಿಯಂತೆ ಇತರರಿಗೆ ನೆರವಾಗಲು ಈ ಹಬ್ಬವು ಪ್ರೇರಣೆಯನ್ನು ನೀಡುತ್ತದೆ.

‘ಉರಿಯುತ್ತಿರುವ ದೀಪವನ್ನು ಪಾತ್ರೆಯ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದಿಲ್ಲ! ಅದನ್ನು ದೀಪಸ್ತಂಭದ ಮೇಲೆ ಇಡಲಾಗುತ್ತದೆ. ಆಗ ಪ್ರತಿಯೊಂದು ಸ್ಪಷ್ಟವಾಗಿ ಗೋಚರವಾಗುವುದು’ - ನಾವು ಸತ್ಕ್ರಿಯೆಗಳೆಂಬ ದೀಪಗಳ ಮೂಲಕ ನಮ್ಮ ಆಂತರಿಕ ಬೆಳಕನ್ನು ಇತರರಿಗೆ ನೀಡಿ ಅವರಿಗೆ ದಾರಿದೀಪವಾಗಬೇಕು. ಜನರು ನಮ್ಮ ಬೆಳಕಿನಲ್ಲಿ ಮುಂದೆ ಸಾಗುವಂತಾಗಬೇಕು ಎಂದಿರುವ ಧರ್ಮಾಧ್ಯಕ್ಷರು, ನಾಡಿನ ಸಮಸ್ತ ಬಾಂಧವರಿಗೆ ದೀಪಾವಳಿ ಹಬ್ಬ ಶುಭಾಶಯಗಳನ್ನು ಕೋರಿದ್ದಾರೆ.

ಬೆಳಕಿನ ಮೂಲವಾದ ಭಗವಂತ, ನಮ್ಮೆಲ್ಲರ ಹೃದಯಗಳನ್ನು, ಮನೆ- ಮನಗಳನ್ನು ಬೆಳಗಿಸಿ ಶಾಂತಿ ಸಮೃದ್ಧತೆಯನ್ನು ದಯಪಾಲಿಸಲಿ ಎಂದು ಡಾ.ಜೆರಾಲ್ಡ್ ಲೋಬೊ ತಮ್ಮ ದೀಪಾವಳಿ ಸಂದೇಶದಲ್ಲಿ ಹಾರೈಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X