ಬಾಲಾಕೋಟ್ ವೈಮಾನಿಕ ದಾಳಿಯ ವೀರ ಅಭಿನಂದನ್ ಗ್ರೂಪ್ ಕ್ಯಾಪ್ಟನ್ ಆಗಿ ಭಡ್ತಿ

ಹೊಸದಿಲ್ಲಿ: ಬಾಲಾಕೋಟ್ ವೈಮಾನಿಕ ದಾಳಿಯ ವೀರ, ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಗ್ರೂಪ್ ಕ್ಯಾಪ್ಟನ್ ಹುದ್ದೆಗೆ ಭಾರತೀಯ ವಾಯುಪಡೆಯು ಭಡ್ತಿ ನೀಡಿದೆ ಎಂದು India Today ವರದಿ ಮಾಡಿದೆ.
ಗ್ರೂಪ್ ಕ್ಯಾಪ್ಟನ್ ಹುದ್ದೆಯು ಭಾರತೀಯ ಸೇನೆಯ ಕರ್ನಲ್ ಹುದ್ದೆಗೆ ಸಮನಾಗಿದೆ ಎಂದು ವರದಿ ಉಲ್ಲೇಖಿಸಿದೆ.
ಅಭಿನಂದನ್ ಅವರು ಎಫ್ -16 ಅನ್ನು ಹೊಡೆದುರುಳಿಸಿದ ಏಕೈಕ ಮಿಗ್ -21 ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಫೆಬ್ರವರಿ 2019 ರಲ್ಲಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ವೈಮಾನಿಕ ದಾಳಿಯಲ್ಲಿ ಅವರ ಪಾತ್ರಕ್ಕಾಗಿ ಅಭಿನಂದನ್ ಅವರಿಗೆ ವೀರ ಚಕ್ರವನ್ನು ನೀಡಲಾಗಿದೆ.
Next Story