ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ,ನ.3: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕೇಂದ್ರವು ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್‌ಗಳ ಮೇಲಿನ ಅಬಕಾರಿ ಸುಂಕವನ್ನು ಇಳಿಸಿದೆ.
ಅಬಕಾರಿ ಸುಂಕ ಪೆಟ್ರೋಲ್ ಮೇಲೆ ಐದು ರೂ. ಮತ್ತು ಡೀಸೆಲ್ ಮೇಲೆ 10 ರೂ.ಕಡಿಮೆಯಾಗಲಿದ್ದು,ನೂತನ ದರಗಳು ಗುರುವಾರದಿಂದ ಜಾರಿಗೊಳ್ಳಲಿವೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಾಖಲೆಯ ಎತ್ತರಕ್ಕೆ ತಲುಪಿರುವ ಸಂದರ್ಭದಲ್ಲಿ ಸರಕಾರದ ಈ ನಿರ್ಧಾರ ಹೊರಬಿದ್ದಿದೆ.
ವಿಶ್ವದ ಅತ್ಯಂತ ದೊಡ್ಡ ತೈಲ ಬಳಕೆದಾರ ರಾಷ್ಟ್ರವಾಗಿರುವ ಅಮೆರಿಕ ಭಾರೀ ಪ್ರಮಾಣದಲ್ಲಿ ಕಚ್ಚಾ ಮತ್ತು ಸಂಸ್ಕರಿತ ತೈಲದ ದಾಸ್ತಾನು ಹೊಂದಿದೆ ಎಂದು ಉದ್ಯಮದ ಅಂಕಿಅಂಶಗಳು ಬೆಟ್ಟು ಮಾಡಿರುವ ಮತ್ತು ಪೂರೈಕೆಯನ್ನು ಹೆಚ್ಚಿಸುವಂತೆ ಒಪೆಕ್ ದೇಶಗಳ ಮೇಲೆ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಬುಧವಾರ ತೈಲಬೆಲೆಗಳು ಕುಸಿದಿವೆ.
Next Story