ರಾಜ್ಯದಲ್ಲಿಂದು 254 ಮಂದಿಗೆ ಕೊರೋನ ಪ್ರಕರಣ ದೃಢ: 2 ಮಂದಿ ಮೃತ್ಯು

ಬೆಂಗಳೂರು, ನ.3: ರಾಜ್ಯದಲ್ಲಿ ಬುಧವಾರ 254 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, 316 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,89,014ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,091ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 8,306ಕ್ಕೆ ಇಳಿಕೆಯಾಗಿದೆ, ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
ಇಬ್ಬರು ಸೋಂಕಿತರ ಬಲಿ: ಬೆಂಗಳೂರು ನಗರ 1, ಉತ್ತರ ಕನ್ನಡದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 254 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 151, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ಧಾರವಾಡ 1, ಹಾಸನ 8, ಕೊಡಗು 5, ಮಂಡ್ಯ 6, ಮೈಸೂರು 19, ರಾಯಚೂರು 1, ರಾಮನಗರ 1, ಶಿವಮೊಗ್ಗ 1, ತುಮಕೂರು 11, ಉಡುಪಿ 11, ಉತ್ತರ ಕನ್ನಡ ಜಿಲ್ಲಿಯಲ್ಲಿ 12 ಪ್ರಕರಣ ಪತ್ತೆಯಾಗಿವೆ.
ರಾಜಧಾನಿಯಲ್ಲಿ ಬುಧವಾರ 151 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,52,257 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,285 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,29,570 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು, ಆರೋಗ್ಯ ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.







