ನಾನೇ ಮಾಡಿದ್ದು ಎಂದು ಬೀಗುವಾಗ ಹತ್ತು ಬಾರಿ ಯೋಚಿಸಿ: ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು
''ದಲಿತರ ಪರವಾಗಿ ಕೆಲಸ ಮಾಡುವುದು ನಿಮ್ಮ ಕರ್ತವ್ಯ''

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತರ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿರುವ ಬೆನ್ನಲ್ಲೇ ಬಿಜೆಪಿಯಲ್ಲಿರುವ ದಲಿತ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದ ಸಿದ್ದರಾಮಯ್ಯ, ಬಿಜೆಪಿಗೆ ಕೆಲವು ಸವಾಲುಗಳನ್ನು ಮುಂದಿಟ್ಟಿದ್ದರು.
#ದಲಿತವಿರೋಧಿಬಿಜೆಪಿ ಹ್ಯಾಶ್ ಟ್ಯಾಗ್ ನಲ್ಲಿ ದಲಿತರ ಪರವಾಗಿ ತನ್ನ ಸರಕಾರ ಜಾರಿಗೊಳಿಸಿದ್ದ ಯೋಜನೆಗಳ ಕುರಿತು ಸಿದ್ದರಾಮಯ್ಯ ಕೆಲವು ಮಾಹಿತಿಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದರು.
ಇದೀಗ ಸಿದ್ದರಾಮಯ್ಯ ಅವರ ಟ್ವೀಟ್ ಗೆ ತಿರುಗೇಟು ನೀಡಿರುವ ಬಿಜೆಪಿ, 'ತಾನೊಬ್ಬ ಅಹಿಂದ ನಾಯಕ ಎಂದು ಅಧಿಕಾರಕ್ಕೆ ಬಂದ ಮೇಲೆ ದಲಿತ ಸಮುದಾಯದ ಪರವಾಗಿ ಕೆಲಸ ಮಾಡುವುದು ನಿಮ್ಮ ಕರ್ತವ್ಯ. ಅದರಲ್ಲಿ ಹೆಚ್ಚುಗಾರಿಕೆ ಮೆರೆಯುವ ಅಗತ್ಯವಿಲ್ಲ. ನಾನೇ ಮಾಡಿದ್ದು ಎಂದು ಬೀಗುವಾಗ ಹತ್ತು ಬಾರಿ ಯೋಚಿಸಿ' ಎಂದು ಹೇಳಿದೆ.
'ಎಷ್ಟು ಬಾರಿ ಹಳೆ ಕತೆ ಹೇಳುತ್ತೀರಿ ಸ್ವಾಮಿ? ಜನ ಹೊಸದನ್ನು ಬಯಸುತ್ತಿದ್ದಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಮುಂದೆ ನಿಂತು "ದಲಿತರನ್ನು ಮುಖ್ಯಮಂತ್ರಿ" ಮಾಡುತ್ತೇನೆ ಎಂದು ಹೇಳಿ ನೋಡೋಣ. ಆಗ ನಿಮ್ಮ ದಲಿತ ಪ್ರೇಮವನ್ನು ಒಪ್ಪಿಕೊಳ್ಳೋಣ' ಎಂದು ಬಿಜೆಪಿ ಹೇಳಿದೆ.
ಸಿದ್ದರಾಮಯ್ಯನವರೇ,
— BJP Karnataka (@BJP4Karnataka) November 4, 2021
ತಾನೊಬ್ಬ ಅಹಿಂದ ನಾಯಕ ಎಂದು ಅಧಿಕಾರಕ್ಕೆ ಬಂದ ಮೇಲೆ ದಲಿತ ಸಮುದಾಯದ ಪರವಾಗಿ ಕೆಲಸ ಮಾಡುವುದು ನಿಮ್ಮ ಕರ್ತವ್ಯ. ಅದರಲ್ಲಿ ಹೆಚ್ಚುಗಾರಿಕೆ ಮೆರೆಯುವ ಅಗತ್ಯವಿಲ್ಲ.
ನಾನೇ ಮಾಡಿದ್ದು ಎಂದು ಬೀಗುವಾಗ ಹತ್ತು ಬಾರಿ ಯೋಚಿಸಿ. #ದಲಿತವಿರೋಧಿಸಿದ್ದರಾಮಯ್ಯ pic.twitter.com/P5TWe0TMPa







