ಶಿವಮೊಗ್ಗ: ಕೇಂದ್ರ ಕಾರಾಗೃಹ ಸಿಬ್ಬಂದಿ ಆತ್ಮಹತ್ಯೆ

ಶಿವಮೊಗ್ಗ,ನ.4: ಶಿವಮೊಗ್ಗದ ಕೇಂದ್ರ ಕಾರಾಗೃಹದ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೈಲು ಆವರಣದಲ್ಲಿರುವ ಕ್ವಾಟರ್ಸ್‌ನಲ್ಲಿ ನಡೆದಿದೆ.
ಅಶ್ವಾಕ್ (25) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ. ಜೈಲಿನಲ್ಲಿ ಡಿ ದರ್ಜೆ ನೌಕರನಾಗಿರುವ ಅಶ್ವಾಕ್ ಅಲಿ ತೊಗರಿ ಬುಧವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಶ್ವಾಕ್ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಾರ್ಡ್‌ರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಶ್ವಾಕ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು.ಅದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
Next Story





