ನ. 8ರಿಂದ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ
ಉಡುಪಿ, ನ.4: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2022ರ ಜ.1ನ್ನು ಅರ್ಹತಾ ದಿನವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನ.8ರಿಂದ ಡಿ.8ರವರೆಗೆ ನಡೆಯಲಿದೆ.
ಈ ಅವಧಿಯಲ್ಲಿ ಸಾರ್ವಜನಿಕರಿಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ತೆಗೆದು ಹಾಕುವ ಸಲುವಾಗಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಈ ಸಂಬಂಧ ಚುನಾವಣಾ ಆಯೋಗವು ನ.7, 14, 21 ಹಾಗೂ 28ರಂದು ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಆಯೋಜಿಸುವಂತೆ ನಿರ್ದೇಶನ ನೀಡಿದ್ದು, ಅದರಂತೆ ನ.7,14,21,28ರಂದು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 1111 ಮತಗಟ್ಟೆ ವ್ಯಾಪ್ತಿಯಲ್ಲಿ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರಿಂದ ನಮೂನೆ-6, 6ಎ, 7, 8, 8ಎ ನಮೂನೆಗಳನ್ನು ಸ್ವೀಕರಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





