ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಹಲವು ಪ್ರದೇಶಗಳು ಜಲಾವೃತ

ಬೆಂಗಳೂರು: ಗುರುವಾರ ಸಂಜೆ ಸುರಿದ ಭಾರೀ ಮಳೆಗೆ ನಗರದ ಹಲವಾರು ಬಡಾವಣೆಗಳು ಜಲಾವೃತಗೊಂಡಿದೆ.
ನಗರದ ಯಶವಂತಪುರ, ನಾಗರಬಾವಿ, ಅನ್ನಪೂರ್ಣೇಶ್ವರಿನಗರ, ಮೈಸೂರು ರಸ್ತೆ, ಬನಶಂಕರಿ, ಚಂದ್ರಾಲೇಔಟ್, ವಿಜಯನಗರ, ಮಾಗಡಿ ರಸ್ತೆ, ಸುಂಕದಕಟ್ಟೆ, ಉತ್ತರಹಳ್ಳಿ, ಕೆಂಗೇರಿ, ಶಾಂತಿನಗರ, ಆಸ್ಟಿನ್ಟೌನ್ ಸೇರಿದಂತೆ ಹಲವು ಬಡಾವಣೆಗಳ ತಗ್ಗು ಪ್ರದೇಶಗಳು ಜಲಾವೃತವಾಗಿವೆ.
ಭಾರೀ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.




.jpg)
.jpg)
.jpg)
.jpg)
.jpg)

