ನ.16ರಂದು ಬೆಂಗಳೂರು ಅರಮನೆ ಮೈದಾನದಲ್ಲಿ `ಪುನೀತ್ ನಮನ'

ಬೆಂಗಳೂರು, ನ. 4: ಇತ್ತೀಚೆಗೆ ನಮ್ಮನ್ನು ಅಗಲಿದ ಕನ್ನಡ ಚಿತ್ರರಂಗದ `ಪವರ್ ಸ್ಟಾರ್' ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ನ.16ರ ಅಪರಾಹ್ನ 3:30ಕ್ಕೆ ನಗರದ ಬೆಂಗಳೂರು ಅರಮನೆ ಮೈದಾನದಲ್ಲಿರುವ ನಲ್‍ಪಾಡ್ ಪ್ಯಾಲೇಸ್ ಸಭಾಂಗಣದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್ ನಮನ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರ ಸಚಿವ ಸಂಪುಟದ ಸದಸ್ಯರು, ಭಾರತೀಯ ಚಲನಚಿತ್ರ ರಂಗದ ಹಲವು ಪ್ರಮುಖರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ.
Next Story





