Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ಗೆ...

ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ಗೆ ಬ್ರಿಟನ್‌ನ ಆಶ್ಡೆನ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ5 Nov 2021 10:47 AM IST
share
ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ಗೆ ಬ್ರಿಟನ್‌ನ ಆಶ್ಡೆನ್ ಪ್ರಶಸ್ತಿ

ಮಣಿಪಾಲ, ನ.5: ಸುಸ್ಥಿರ ಶಕ್ತಿಯಕೌಶಲ ವೃದ್ಧಿಯ ಸಾಧನೆಗಾಗಿ ದೊರೆಯುವ ಜಾಗತಿಕ ಮಟ್ಟದ ಆಶ್ಡೆನ್ ಪ್ರಶಸ್ತಿಗೆ ಈ ಬಾರಿ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ಆಯ್ಕೆಯಾಗಿದೆ. 

ನವೆಂಬರ್ 4ರಂದು ರಾತ್ರಿ ಲಂಡನ್ ನ ಗ್ಲಾಸ್ಗೋದಲ್ಲಿ ನಡೆದ COP 26 ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಪ್ರಶಸ್ತಿಯ ಮೊತ್ತವು 20 ಸಾವಿರ ಪೌಂಡ್ ಗಳನ್ನು ಒಳಗೊಂಡಿದೆ. ಜೊತೆಗೆ ಜಗತ್ತಿನ ವಿವಿಧೆಡೆ ಸುಸ್ಥಿರ ಇಂಧನ ಕ್ಷೇತ್ರದಲ್ಲಿ ಕೆಲಸ ಮಾಡುವ ಸಂಸ್ಥೆಗಳ ಜೊತೆಗೆ ಮಾಹಿತಿ ವಿನಿಮಯ ಮಾಡುವ ಅವಕಾಶ, ಸಹಭಾಗಿತ್ವದ ಅವಕಾಶಗಳು ಬಿವಿಟಿಗೆ ಲಭ್ಯವಾಗಲಿವೆ. ಗ್ಲಾಸ್ಗೋದಲ್ಲಿ ನಡೆದ ಸಮಾರಂಭದಲ್ಲಿ ಬಿವಿಟಿಯ ಮಾಸ್ಟರ್ ಟ್ರೆನರ್ ಆಗಿರುವ ಸುಧೀರ್ ಕುಲಕರ್ಣಿ ಅವರು ಸುದೀಪ್ತ ಘೋಷ್ ಅವರ ಜೊತೆಯಲ್ಲಿ ಈ ಪ್ರಶಸ್ತಿ ಸ್ವೀಕರಿಸಿದರು.

ಹವಾಮಾನ ಬದಲಾವಣೆಯ ತೀವ್ರತೆಯನ್ನು ಕಡಿಮೆ ಮಾಡುವ ಪರಿಹಾರಗಳಿಗೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿರುವ ಆಶ್ಡೆನ್ ಸಂಸ್ಥೆಯು, ಇದೇ ಮಾದರಿಯ ಕೆಲಸಗಳನ್ನು ಮಾಡುತ್ತಿರುವ ಜಗತ್ತಿನ ವಿವಿಧೆಡೆಯ ಸಂಸ್ಥೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಪ್ರಶಸ್ತಿ ನೀಡುತ್ತಿದೆ. ಈ ಬಾರಿಯ ಪ್ರಶಸ್ತಿಗಾಗಿ ವಿವಿಧ ದೇಶಗಳ 800ಕ್ಕೂ ಹೆಚ್ಚು ಸಂಸ್ಥೆಗಳು ಅರ್ಜಿ ಸಲ್ಲಿಸಿದ್ದವು. ಈ ಪೈಕಿ ಭಾರತದ ಎರಡು ಸಂಸ್ಥೆಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿಗಾಗಿ ಕರ್ನಾಟಕದ ಮಣಿಪಾಲದ  ಭಾರತೀಯ ವಿಕಾಸ ಟ್ರಸ್ಟ್ ಆಯ್ಕೆಯಾಗಿದೆ.

ಜಗತ್ತಿನಾದ್ಯಂತ ಪರಿಸರ ಸ್ನೇಹಿ ಉಪಕ್ರಮಗಳಿಗೆ ಸಂಬಂಧಿಸಿದಂತೆ ಅನೇಕ ಉತ್ತಮ ಯೋಜನೆಗಳು ಕಾರ್ಯರೂಪಕ್ಕೆ ಬರುತ್ತಿವೆ. ಆದ್ದರಿಂದ ಪ್ರಶಸ್ತಿಗೆ ಉತ್ತಮವಾದ ಅನೇಕ ಪರಿಹಾರಗಳನ್ನು ಕೇಂದ್ರೀಕರಿಸಿದ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆಶ್ಡೆನ್ ಸಂಸ್ಥೆಯು ಪರಿಸರ ಸ್ನೇಹಿ ಉಪಕ್ರಮವನ್ನು ಸಮಗ್ರವಾದ ದೃಷ್ಟಿಕೋನದಲ್ಲಿ ನೋಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಿವಿಟಿಯ ಕಾರ್ಯಕ್ಷೇತ್ರವು ಹವಾಮಾನ ಬದಲಾವಣೆಯ ತೀವ್ರತೆಯನ್ನು ತಗ್ಗಿಸುವುದಷ್ಟೇ ಅಲ್ಲದೆ ಅದು ಕೈಗೆತ್ತಿಕೊಂಡ ಉಪಕ್ರಮಗಳು ಉದ್ಯೋಗ ಸೃಷ್ಟಿ ಮಾಡುತ್ತವೆ. ಪರಿಸರ ಸ್ನೇಹಿ ಕೌಶಲಗಳನ್ನು ಕರಗತ ಮಾಡಿಕೊಳ್ಳುವ ನಿಟ್ಟಿನಲ್ಲಿ ಜನರಿಗೆ ತರಬೇತಿಗಳನ್ನು ನೀಡಿ ಅವರಿಗೆ ಶಿಕ್ಷಣವನ್ನೂ ಒದಗಿಸುತ್ತವೆ. ಈ ನಿಟ್ಟಿನಲ್ಲಿ ಬಿವಿಟಿಯ ಕಾರ್ಯವೈಖರಿಗೆ ವಿಶೇಷ ಮನ್ನಣೆ ಲಭಿಸಿದೆ.

ಪಾರದರ್ಶಕವಾಗಿ ಹಲವು ಸುತ್ತುಗಳಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಆಶ್ಡೆನ್ ಸಂಸ್ಥೆಯ ಅಧಿಕಾರಿಗಳ ತಂಡ ಸ್ವತಃ ಭೇಟಿ ನೀಡಿ, ಬಿವಿಟಿಯ ಕಾರ್ಯವೈಖರಿಯನ್ನು ವೀಕ್ಷಿಸಿ ಮೌಲ್ಯಮಾಪನ ಮಾಡಿದೆ.

‘ಕಳೆದ ಎರಡು ದಶಕಗಳಲ್ಲಿ, ಸಂಸ್ಥೆಯ ವಿವಿಧ ಪಾಲುದಾರರ ಪೈಕಿ 1000ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಬಿವಿಟಿ ಸೌರಶಕ್ತಿ ಕೌಶಲಗಳ ಕುರಿತು ತರಬೇತಿ ನೀಡಿದ್ದು, ಯುವಕರಿಗೆ ಉದ್ಯೋಗ ಒದಗಿಸುವ ಮತ್ತು ಗ್ರಾಮೀಣ ಅಭಿವೃದ್ಧಿಗೆ ಪೂರಕವಾದ ಕೆಲಸಗಳನ್ನು ಮಾಡಿದೆ. ನೇರವಾಗಿ ಪಾಲುದಾರರಿಗೆ ತರಬೇತಿ ನೀಡಿದ್ದಲ್ಲದೆ, ಬಳಕೆದಾರರಿಗೆ ಕೂಡ ತರಬೇತಿ ನೀಡುವ ಈ ಮಾದರಿಯನ್ನು ದೇಶಾದ್ಯಂತ ವಿಸ್ತರಿಸುವ ಉದ್ದೇಶ ಬಿವಿಟಿಗೆ ಇದೆ. ಪ್ರಶಸ್ತಿಯಿಂದ ಬಿವಿಟಿಯ ಕೆಲಸಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆತಂತಾಗಿದೆ’ ಎಂದು ಬಿವಿಟಿಯ ವ್ಯವಸ್ಥಾಪಕ ಟ್ರಸ್ಟಿ, ಟಿ. ಅಶೋಕ್ ಪೈ ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X