ನ.7ರಂದು ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ
ಮಂಗಳೂರು, ನ.5: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಮಂಗಳೂರು ನಗರ ದಕ್ಷಿಣ ಸಮ್ಮೇಳನವು ನ.7ರಂದು ಬೆಳಗ್ಗೆ 9ಕ್ಕೆ ಬಜಾಲ್ ಪಕ್ಕಲಡ್ಕದಲ್ಲಿರುವ ಭಗತ್ ಸಿಂಗ್ ಭವನದಲ್ಲಿ ಜರುಗಲಿದೆ.
ಸಿಪಿಎಂ ಹಿರಿಯ ಸದಸ್ಯ ಚಂದು ಭಂಡಾರಿ ಧ್ವಜಾರೋಹಣ ಮಾಡುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಸಮ್ಮೇಳನವನ್ನು ಸಿಪಿಎಂ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಉದ್ಘಾಟಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಬಜಾಲ್ ವಹಿಸಲಿದ್ದಾರೆ.
ಸಮ್ಮೇಳನದಲ್ಲಿ ದುಡಿಯುವ ವರ್ಗದ ಚಳುವಳಿಗಾಗಿ ಅವಿಶ್ರಾಂತವಾಗಿ ದುಡಿದ ಪಕ್ಷದ ಹಿರಿಯ ಸದಸ್ಯರಿಗೆ ಗೌರವ ಸಮರ್ಪಣೆ ನಡೆಯಲಿದೆ. ಅಂದು ಸಂಜೆ 4:30ಕ್ಕೆ ಪಕ್ಕಲಡ್ಕದಲ್ಲಿ ಬಹಿರಂಗ ಸಭೆ ಜರುಗಲಿದ್ದು, ಮುಖ್ಯ ಭಾಷಣಕಾರರಾಗಿ ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಯಾದವ ಶೆಟ್ಟಿ, ಜೆ.ಬಾಲಕೃಷ್ಣ ಶೆಟ್ಟಿ, ಸುನೀಲ್ ಕುಮಾರ್ ಬಜಾಲ್ ರವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





