ಪ್ರವಾದಿ ಬಗ್ಗೆ ಅವಹೇಳನಕಾರಿ ಪದ ಬಳಕೆ : ಜಗದೀಶ್ ಕೈವತ್ತಡ್ಕ ವಿರುದ್ಧ ಎಫ್‌ಐಆರ್

ಸುಳ್ಯ, ನ.5: ಪ್ರವಾದಿ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದಲ್ಲಿ ಜಗದೀಶ ಕೈವತ್ತಡ್ಕ ಎಂಬಾತನ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೇಸ್‌ಬುಕ್ ಪೋಸ್ಟೊಂದಕ್ಕೆ ಪ್ರತಿಕ್ರಿಯಿಸಿದ್ದ ಜಗದೀಶ ಪ್ರವಾದಿ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿರುವುದಾಗಿ ಎಸ್‌ಡಿಪಿಐ ಪನ್ನೆ ಬೂತ್ ಸಮಿತಿಯ ಉಪಾಧ್ಯಕ್ಷ ನೌಫಲ್ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಗದೀಶನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಎಸ್‌ಡಿಪಿಐ, ಎಸ್ಸೆಸ್ಸೆಫ್‌ನಿಂದ ಒತ್ತಾಯ: ಪ್ರವಾದಿ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡುವ ಮೂಲಕ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಜಗದೀಶನ ವಿರುದ್ಧ ಜಿಲ್ಲಾ ಪೊಲೀಸರು ಕ್ರಮಕೈಗೊಳ್ಳಬೇಕು. ಸಮಾಜದ ಶಾಂತಿಯನ್ನು ಕದಡಲು ಯತ್ನಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಅಶಾಂತಿಯನ್ನು ತಡೆಯಬೇಕು ಎಂದು ಎಸ್‌ಡಿಪಿಐ ಹಾಗೂ ಎಸ್ಸೆಸ್ಸೆಫ್ ಸಂಘಟನೆಗಳು ಒತ್ತಾಯಿಸಿದ್ದವು.
Next Story





