ಟಿ-ಟ್ವೆಂಟಿ ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಶಾರ್ಜಾ: ಯುಎಇಯಲ್ಲಿ ನಡೆಯುತ್ತಿರುವ ವಿಶ್ವಕಪ್ ಟಿ-ಟ್ವೆಂಟಿ ಪಂದ್ಯಾಟದಲ್ಲಿ ಭಾರತ ಕ್ರಿಕೆಟ್ ತಂಡವು ಸ್ಕಾಟ್ಲಾಂಡ್ ತಂಡವನ್ನು ಅನಾಯಾಸವಾಗಿ ಮಣಿಸಿದೆ. ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡ ಸ್ಕಾಟ್ಲೆಂಡ್ ತಂಡ ನೀಡಿದ 85 ರನ್ ಗಳ ಗುರಿಯನ್ನು ಬೆನ್ನತ್ತಿದ ಭಾರತ ತಂಡ ಎರಡು ವಿಕೆಟ್ ಗಳ ನಷ್ಟಕ್ಕೆ ಗುರಿ ತಲುಪಿತು.
ಮೊದಲು ಬ್ಯಾಟಿಂಗ್ ಮಾಡಿದ ಸ್ಕಾಟ್ಲೆಂಡ್ ತಂಡವು ಮುಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಮಾರಕ ಬೌಲಿಂಗ್ ದಾಳಿಗೆ ತುತ್ತಾಗಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 17.4 ಓವರ್ ಗಳಿಗೆ 85 ರನ್ ಪೇರಿಸಿತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಗೆ ಇಳಿದ ಭಾರತ ತಂಡವು ಕೆ.ಎಲ್ ರಾಹುಲ್ (50) ಹಾಗೂ ರೋಹಿತ್ ಶರ್ಮಾ (30) ರನ್ ಗಳ ನೆರವಿನಿಂದ ಕೇವಲ 6.3 ಎಸೆತಗಳ ನೆರವಿನಿಂದ ಗುರಿಯನ್ನು ತಲುಪಿತು.
Next Story