ಮಂಗಳೂರು, ನ.6: ದ.ಕ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂವನ್ನು ಸಂಪೂರ್ಣವಾಗಿ ಹಿಂಪಡೆದಿರುವುದಾಗಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.