ತ್ರಿಪುರ: ದನಗಳ್ಳತನದ ಶಂಕೆಯಲ್ಲಿ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

Photo: Ndtv
ಅಗರ್ತಲಾ: ತ್ರಿಪುರಾದಲ್ಲಿ ಹಸುಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದಿರುವ ಘಟನೆ ಇಂದು ನಡೆದಿದೆ. ಶುಕ್ರವಾರ ತಡರಾತ್ರಿ ಮೂವರು ಶಂಕಿತ ಜಾನುವಾರು ಕಳ್ಳಸಾಗಾಣಿಕೆದಾರರು ಬಾಂಗ್ಲಾದೇಶದಿಂದ ರಾಜ್ಯವನ್ನು ಪ್ರವೇಶಿಸಿದ್ದು, ಹಸುಗಳನ್ನು ಕದಿಯಲು ಮೂವರು ಲಿಟನ್ ಪೌಲ್ ಎಂಬವರ ಮನೆಗೆ ಪ್ರವೇಶಿಸಿದಾಗ, ಮಾಲೀಕರು ನೆರೆಹೊರೆಯವರ ಸಹಾಯದಿಂದ ಅವರನ್ನು ಹಿಡಿದಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ndtv.com ವರದಿ ಮಾಡಿದೆ.
ಮೂವರು ಶಂಕಿತರಲ್ಲಿ ಇಬ್ಬರು ಯುವಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಓರ್ವನಿಗೆ ಮಾತ್ರ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಕೂಡಲೇ ಸ್ಥಳೀಯರ ಗುಂಪು ಆತನನ್ನು ಥಳಿಸಿ ಕೊಂದಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಲಿಯಾದವರ ಗುರುತು ಇನ್ನೂ ಪತ್ತೆಯಾಗಿಲ್ಲ. ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ಸೋನಮುರಾ ಉಪವಿಭಾಗದ ಕಮಲ್ ನಗರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
Next Story