Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಕ್ಷ ಸಂಘಟನೆಗೆ ಜಿಲ್ಲಾವಾರು ಸಭೆ: ಮಾಜಿ...

ಪಕ್ಷ ಸಂಘಟನೆಗೆ ಜಿಲ್ಲಾವಾರು ಸಭೆ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

2ನೆ ಹಂತದ ಕಾರ್ಯಾಗಾರ: ನ.8ಕ್ಕೆ ಪಕ್ಷದ ಪತ್ರಿಕೆ 'ಜನತಾ ಪತ್ರಿಕೆ' ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ6 Nov 2021 11:35 PM IST
share
ಪಕ್ಷ ಸಂಘಟನೆಗೆ ಜಿಲ್ಲಾವಾರು ಸಭೆ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪಕ್ಷ ಸಂಘಟನೆಗೆ ಬಿಡದಿ ತೋಟದಲ್ಲಿ ಕಾರ್ಯಾಗಾರ ನಡೆಸಿದ ನಂತರ ಇದೀಗ ಮತ್ತೆ ಎರಡನೇ ಹಂತದ ಜೆಡಿಎಸ್ ಸಂಘಟನಾ ಕಾರ್ಯಾಗಾರ ಸೋಮವಾರದಿಂದ (ನ.8ರಿಂದ 15ರ ವರೆಗೆ) ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶನಿವಾರ ಇಲ್ಲಿನ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, `ಎಲ್ಲ ಹಂತಗಳಲ್ಲೂ ಪಕ್ಷವನ್ನು ಸಂಘಟನೆ ಮಾಡಲು ಈ ಕಾರ್ಯಾಗಾರ ಸಹಕಾರಿ ಆಗಲಿದೆ. ಎಂಟು ದಿನಗಳ ಕಾಲ ಹಾಲಿ, ಮಾಜಿ ಶಾಸಕರು, ಪದಾಧಿಕಾರಿಗಳ ಸಭೆ ಇಲ್ಲಿ ನಡೆಯಲಿದೆ. ನವೆಂಬರ್ 15ರಂದು ಈ ಕಾರ್ಯಾಗಾರ ಅಂತ್ಯವಾಗಲಿದೆ' ಎಂದು ತಿಳಿಸಿದರು.

`ದಿನಕ್ಕೆ ಎರಡು ಜಿಲ್ಲೆಗಳನ್ನು ಒಳಗೊಂಡಂತೆ ಸಭೆಗಳನ್ನು ನಡೆಸಲಾಗುವುದು. ಈ ಸಭೆಯಲ್ಲಿ ಮುಂದಿನ ಚುನಾವಣಾ ಸಿದ್ಧತೆ ಸಂಬಂಧ ಚರ್ಚಿಸಲಿದ್ದೇವೆ. ಮಹತ್ವದ ಈ ಸಭೆಯಲ್ಲಿ ಭಾಗಿಯಾಗುವ ಎಲ್ಲರಿಗೂ ಕಠಿಣ ಮತ್ತು ಸ್ಪಷ್ಟ ಮಾರ್ಗಸೂಚಿ ನೀಡಲಾಗುವುದು. ತದ ನಂತರ ಹೇಗೆ ಕೆಲಸ ಮಾಡಬೇಕು ಎಂಬುದನ್ನು ಸೂಚಿಸಲಾಗುವುದು' ಎಂದು ಅವರು ತಿಳಿಸಿದರು.

ಪತ್ರಿಕೆ ಲೋಕಾರ್ಪಣೆ: ನಾಳೆ(ನ.8) ಪಕ್ಷದ ವಿಚಾರಗಳನ್ನು ಜನತೆ ಮತ್ತು ಪಕ್ಷದ ಕಾರ್ಯಕರ್ತರಿಗೆ ತಿಳಿಸುವ ಮಾಸಿಕ `ಜನತಾ ಪತ್ರಿಕೆ'ಯನ್ನು ಬಿಡುಗಡೆ ಮಾಡಲಾಗುವುದು. ನಾಡಿನ ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಅವರು ಪತ್ರಿಕೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದ ಅವರು, ನನ್ನ ಸಂಪಾದಕೀಯ ನೇತೃತ್ವದಲ್ಲಿ ಈ ಪತ್ರಿಕೆ ಮೂಡಿ ಬರುತ್ತಿದ್ದು, ನಾಡಿನ ಜನರ ಆಶೋತ್ತರಗಳನ್ನು ಈಡೇರಿಸಲು ಹಾಗೂ ಪಕ್ಷದ ದನಿಯನ್ನು ಜನರಿಗೆ ಮುಟ್ಟಿಸುವ ಗುರಿಯನ್ನು ಹೊಂದಿದೆ. ಕಾರ್ಯಕರ್ತರಿಗೆ ಪಕ್ಷದ ಬಗ್ಗೆ ದಿಕ್ಸೂಚಿಯಾಗಿ ಹಾಗೂ ಮಾರ್ಗದರ್ಶಿಯಾಗಿ ಮುನ್ನಡೆಸುತ್ತದೆ ಎಂದು ಮಾಹಿತಿ ನೀಡಿದರು.

ಲಘುವಾಗಿ ಮಾತನಾಡುವುದನ್ನು ಬಿಡಿ: ಕೆಲವರು ನಮ್ಮ ಮಿಷನ್-123 ಬಗ್ಗೆ ಲಘುವಾಗಿ ಮಾತನ್ನಾಡುತ್ತಿದ್ದಾರೆ. ಹಾಗೆ ಮಾತನಾಡುವ ಅಗತ್ಯವಿಲ್ಲ. 2023ರ ನಮ್ಮ ಗುರಿ ಏನಿದೆ ಅದನ್ನು ಮುಟ್ಟುತ್ತೇವೆ. ನಮ್ಮ ದಾರಿ ಮತ್ತು ಗುರಿಯ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಯಾರೂ ಈ ಬಗ್ಗೆ ಉಪದೇಶ ಮಾಡುವ ಅಗತ್ಯ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಪಕ್ಷ ಬಿಟ್ಟುವರಿಂದ ಸಂಘಟನೆಗೆ ಯಾವುದೇ ಶಕ್ತಿ ಬಂದಿಲ್ಲ. ಪಕ್ಷದಿಂದ ಅನುಕೂಲ ಪಡೆದುಕೊಂಡು ಕೆಲವರು ಹೋಗುತ್ತಿದ್ದಾರೆ. ಯಾರು ಯಾವಾಗ ಪಕ್ಷ ಬಿಡುತ್ತಾರೆ ಎನ್ನುವ ಮಾಹಿತಿ ನನಗೆ ಎರಡು ವರ್ಷಗಳ ಹಿಂದೆಯೇ ಇದೆ. ಮಾಧ್ಯಮದವರಾದ ನಿಮಗೆ ಈಗ ಅದು ಹೊಸದು ಅನ್ನಿಸಬಹುದು. ಕೆಲವರು ದೈಹಿಕವಾಗಿ ಇಲ್ಲೇ ಇರಬಹುದು. ಮಾನಸಿಕವಾಗಿ ಬೇರೆ ಕಡೆ ಹೋಗಿದ್ದಾರೆ ಎಂದು ಕುಮಾರಸ್ವಾಮಿ ನೇರವಾಗಿಯೇ ತಿರುಗೇಟು ನೀಡಿದರು.

ಬಿಜೆಪಿ, ಜೆಡಿಎಸ್‌ನಿಂದ ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ನಾಯಕರು ಹೇಳ್ತಿದ್ದಾರೆ. ಅದರಿಂದ ನನಗೆ ಯಾವ ಶಾಕ್ ಆಗುವುದಿಲ್ಲ. ಪಕ್ಷಕ್ಕಾಗಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X