ಶ್ರೀರಂಗಪಟ್ಟಣ; ಮಕ್ಕಳಿಬ್ಬರನ್ನು ಕೊಠಡಿಯಲ್ಲಿ ಕೂಡಿ ಹಾಕಿ ದಂಪತಿ ಆತ್ಮಹತ್ಯೆ

ಮಂಡ್ಯ, ನ.7: ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಠಡಿಯಲ್ಲಿ ಕೂಡಿ ಹಾಕಿ ಬಳಿಕ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೂಡಲಕುಪ್ಪೆ ಗ್ರಾಮದಲ್ಲಿ ರವಿವಾರ ನಡೆದಿರುವುದು ವರದಿಯಾಗಿದೆ.
ದೇವರಾಜು(55) ಹಾಗೂ ರೂಪಾ(45) ಎಂಬವರು ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರು ಮಕ್ಕಳಾದ ದರ್ಶನ್ ಮತ್ತು ಧನುಷ್ ರನ್ನು ಕೊಠಡಿಯೊಳಗೆ ಕೂಡಿ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.
ಮಕ್ಕಳ ಚೀರಾಟ ಕೇಳಿ ನೆರೆಹೊರೆಯವರು ಬಾಗಿಲು ತೆರೆದು ನೋಡಿದಾಗ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





