ಕಡಬ: ಕೋಳಿ ಹಿಡಿಯವ ಧಾವಂತದಲ್ಲಿ ಬಾವಿಗೆ ಬಿದ್ದ ಚಿರತೆ

ಕಡಬ, ನ.7: ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ರವಿವಾರ ಸಂಭವಿಸಿದೆ.
ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.
Next Story





