Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಲವಾರು ಸಂಘಟನೆಗಳ ಬದಲು ಶಾಲೆಗಳನ್ನು...

ಹಲವಾರು ಸಂಘಟನೆಗಳ ಬದಲು ಶಾಲೆಗಳನ್ನು ಕಟ್ಟಿ: ವೇದಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Nov 2021 3:05 PM IST
share
ಹಲವಾರು ಸಂಘಟನೆಗಳ ಬದಲು ಶಾಲೆಗಳನ್ನು ಕಟ್ಟಿ: ವೇದಕುಮಾರ್

ಕಾರ್ಕಳ: ನಮ್ಮ ಸಮಾಜದಲ್ಲಿ ಹಲವಾರು ಸಂಘಟನೆಗಳಿವೆ. ಈ ಸಂಘಟನೆಗಳ ಬದಲು ಶಾಲೆಗಳನ್ನು ಕಟ್ಟಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ವೇದ ಕುಮಾರ್ ಎಂ ರವರು ಕರೆ ನೀಡಿದರು

ಇವರು ಶ್ರೀ ನಾರಾಯಣ ಗುರು ರವರ 167ನೇ ಜನ್ಮ ದಿನಾಚರಣೆ ಅಂಗವಾಗಿ ರಶ್ಮಿ ಚಾರಿಟೇಬಲ್ ಟ್ರಸ್ಟ್ (ರಿ) ಕಾರ್ಕಳ ವತಿಯಿಂದ‌ ಬಿಲ್ಲವ ಸಮಾಜ ಸೇವಾ ಸಂಘ (ರಿ)ಇವರ ಸಹಯೋಗದೊಂದಿಗೆ ಕಾರ್ಕಳ ಪೆರ್ವಾಜೆ ಬಲ್ಲವ ಸಮಾಜ ಮಂದಿರದಲ್ಲಿ ಗೌರವಾಭಿನಂದನೆ, ವಿದ್ಯಾರ್ಥಿವೇತನ  ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದರು.

ಬಿಲ್ಲವ ಸಮಾಜದಲ್ಲಿ ಐಎಎಸ್, ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರ ಸಂಖ್ಯೆ ತೀರಾ ಕಡಿಮೆ. ವಿದ್ಯಾವಂತರು ನಗರ ಭಾಗದ ಬದಲು ಹಳ್ಳಿಗಳಿಗೆ ತೆರಳಿ ಬಡಜನರ ಸೇವೆಯನ್ನು ಮಾಡಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದ ಅವರು, ಸಿ ಇ ಟಿ, ನೀಟ್ ಪರೀಕ್ಷೆಗಳಲ್ಲಿ ಉತ್ತಮ ರ್ಯಾಂಕ್ ಪಡೆದು ಸರಕಾರಿ ಕಾಲೇಜಿನಲ್ಲಿ ಬೆಂಗಳೂರಿನಲ್ಲಿ ಕಲಿಯಲಿಚ್ಚಿಸಿರುವವರಗೆ ಉಚಿತವಾಗಿ ಎಲ್ಲಾ ಖರ್ಚು ಗಳನ್ನು ಬೆಂಗಳೂರು ಸಂಘವು ಬರಿಸಲಿದೆ ಎಂದರು.

ಬೆಂಗಳೂರು ಪ್ರದೇಶದಲ್ಲಿ ಕಲಿಯುವ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಸೌಲಭ್ಯಗಳನ್ನು ನೀಡಲಿದ್ದು ಇದರ ಪ್ರಯೋಜನವನ್ನು ಪಡೆದುಕೊಳ್ಳಿ ಎಂದರು.

ಮಾನಸಿಕ ಆವಿಷ್ಕಾರಗಳನ್ನು ಬೆಳೆಸಿಕೊಳ್ಳಿ: ಸೋಲೂರು ಮಠಾಧೀಶರು
ಮನುಷ್ಯನು ಬಟ್ಟೆ, ಸೌಂದರ್ಯ, ಅಲಂಕಾರದಲ್ಲಿ ಮಾತ್ರ ವಿವಿಧ ಆವಿಷ್ಕಾರಗಳು ಮಾಡುವುದು ನಿಜವಾದ ಆವಿಷ್ಕಾರಲ್ಲ ಬದಲಾಗಿ ಮನಸ್ಸಿನ ಮಾನಸಿಕ ಆವಿಷ್ಕಾರಗಳು ಬರಬೇಕು ನಮ್ಮಲ್ಲಿ ನಾನಸಿಕ ಕ್ರಾಂತಿ ನಡೆಯಬೇಕಾಗಿದೆ ಎಂದು ಸೋಲೂರು ಮಠಾಧೀಶ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡುತ್ತಾ, ಮನುಷ್ಯ ಜೀವನ ಅತ್ಯಮೂಲ್ಯವಾದದ್ದು. ತನ್ನ ಜೀವನದ ಸದುಪಯೋಗಪಡಿಸಿಕೊಂಡು ಜೀವನ ಸಾರ್ಥಕಪಡಿಸಿಕೊಳ್ಳಿ, ಸರಕಾರದ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಸಮುದಾಯದ ಜನರು ಕಡಿಮೆಯಾಗುತ್ತಿದೆ. ಅದ್ದರಿಂದ ತನ್ನ ಜೀವಿತಾವಧಿಯಲ್ಲಿ ಕನಿಷ್ಠ ನೂರು ಜನರನ್ನು ಐಎಎಸ್‌, ಅಧಿಕಾರಿಗಳನ್ನಾಗಿ ರೂಪುಗೊಳಿಸುವ ಪ್ರಯತ್ನದಲ್ಲಿದ್ದೇನೆ. ಈ ನಿಟ್ಟಿನಲ್ಲಿ ,1 ನೇ ತರಗತಿಯಿಂದಲೇ 40 ರಿಂದ 80 ಮಕ್ಕಳನ್ನು ದತ್ತು ಸ್ವೀಕರಿಸಿದ್ದೇನೆ. ಮುಂದಿನ ದಿನಗಳಲ್ಲಿ 4000 ಮಕ್ಕಳಿಗೆ ವ್ಯವಸ್ಥಿತವಾಗಿ ಕಲಿಸುವ ಚಿಂತನೆ ನಡೆಸಿದೆ. ಡಿಗ್ರಿ ವಿದ್ಯಾರ್ಥಿಗಳಿಗೆ ಕೆಎಎಸ್, ಪೋಲಿಸ್ ಸ್ಪರ್ಧಾತ್ಮಕ ಪರೀಕ್ಷೆಯ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು ಇದರ ಪ್ರಯೋಜನ ಪಡೆಯುವಂತೆ ಆಗ್ರಹಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಡಿ.ಆರ್.ರಾಜು, ತನ್ನ ರಶ್ಮಿ ಚಾರಿಟೇಬಲ್ ಟ್ರಸ್ಟ್ ಮುಖಾಂತರ ಕಾರ್ಕಳ ತಾಲೂಕಿನ ಬಿಲ್ಲವ ಸಮಾಜ ದ ಬಡ ವಿದ್ಯಾರ್ಥಿಗಳಿಗೆ ಸುಮಾರು 7.87 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ, ಬಡ ನಿರ್ಗತಿಕ ಮಹಿಳೆಯರಿಗೆ ಸಹಾಯಧನ, ಅನಾಥ ಮಕ್ಕಳಿಗೆ ಸಹಾಯಧನವನ್ನು ನೀಡಿದ್ದೇವೆ. ಕಾರ್ಕಳ ತಾಲೂಕಿನ ಬಿಲ್ಲವ ಸಮಾಜದ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂತಾರಾಷ್ಟ್ರೀಯ ಕ್ರೀಡಾಪಟುಗಳು, ಕೊರೊನ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ವೈದರು,‌ ಗ್ರಾಮ ಪಂಚಾಯತ್ ಅದ್ಯಕ್ಷ, ಉಪಾಧ್ಯಕ್ಷರು, ಆರಕ್ಷಕರು, ಅಂಚೆ ಸಿಬ್ಬಂದಿಗಳು, ಆರೋಗ್ಯ ಶುಶ್ರೂಕಿಯರು, ಮತ್ತು ಆಶಾ ಕಾರ್ಯಕರ್ತರನ್ನು ಈ ಸಂದರ್ಭದಲ್ಲಿ ಗೌರವಿಸುವ ಮೂಲಕ ಪೂಜ್ಯನೀಯ ನಾರಾಯಣ ಗುರುಗಳಿಗೆ ಗುರುವಂದನೆ, ಗೌರವ ಸಮರ್ಪಣೆ ಮಾಡಿದ ಸಂತ್ರಪ್ತಿ ನನಗಿದೆ ಇನ್ನೂ ಮುಂದೆಯು ಇಂತಹ ಸಮಾಜ ಮುಖಿ ಕೆಲಸಕ್ಕೆ ನಿಮ್ಮ ಸಹಕಾರ ಸದಾ ಇರಲಿ ಎಂದರು.

ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತ ಎಸ್ ಕೆ ಸಾಲಿಯಾನ್, ರಶ್ಮಿ ಚಾರಿಟೇಬಲ್ ಟ್ರಸ್ಟ್ ಅದ್ಯಕ್ಷೆ ಸಾವಿತ್ರಿ ಡಿ ಆರ್ ರಾಜು ,ಸದಸ್ಯರಾದ ಚಿತ್ತರಂಜನ್ ಸಾಲಿಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಕಳ ತಾಲೂಕಿನ ಬಿಲ್ಲವ ಸಮಾಜದ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂತರಾಷ್ಟ್ರೀಯ ಕ್ರೀಡಾ ಪಟುಗಳು, ವೈದರು,‌ ಗ್ರಾಮ ಪಂಚಾಯತಿ ಅದ್ಯಕ್ಷ, ಉಪಾಧ್ಯಕ್ಷರು, ಆರಕ್ಷಕರು, ಅಂಚೆ ಸಿಬ್ಬಂದಿಗಳು, ಆರೋಗ್ಯ ಶುಶ್ರೂಕಿಯರು, ಮತ್ತು ಆಶಾಕಾರ್ಯಕರ್ತರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು

ಬಿಲ್ಲವ ಸಮಾಜ ಕಾರ್ಯದರ್ಶಿ ಪ್ರಭಾಕರ್ ಬಂಗೇರ ಪ್ರಸ್ತಾವನೆಗೈದರು. ಕೋಶಾಧಿಕಾರಿ ಪ್ರವೀಣ್ ಸುವರ್ಣ, ಧನ್ಯವಾದ ಅರ್ಪಿಸಿದರು.
ವಸಂತ್ ಎಂ, ನವೀನ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚೆಗೆ ನಿಧನರಾದ ಖ್ಯಾತ ಸಿನಿಮಾ ನಟ ಪುನೀತ್ ರಾಜ್‍ಕುಮಾರ್, ಬಿಲ್ಲವ ಮುಖಂಡ ಮಾಜಿ ಪುರಸಭಾ ಅಧ್ಯಕ್ಷ , ಮಾಜಿ ಎ ಪಿ ಎಂ ಸಿ ಅಧ್ಯಕ್ಷ ಪ್ರದೀಪ್ ಕೋಟ್ಯಾನ್ ರವರಿಗೆ ಶ್ರಧ್ದಾಂಜಲಿ ಸಲ್ಲಿಸಲಾಯಿತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X