Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತರ ನೆಮ್ಮದಿಗೆ ಕೇಂದ್ರದ ಕೃಷಿ ವಿರೋಧಿ...

ರೈತರ ನೆಮ್ಮದಿಗೆ ಕೇಂದ್ರದ ಕೃಷಿ ವಿರೋಧಿ ಕಾಯ್ದೆಗಳಿಗೆ ಕಡಿವಾಣ ಅಗತ್ಯ: ರೈತ ಮುಖಂಡ ಹರ್ನೇಕ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ7 Nov 2021 7:34 PM IST
share
ರೈತರ ನೆಮ್ಮದಿಗೆ ಕೇಂದ್ರದ ಕೃಷಿ ವಿರೋಧಿ ಕಾಯ್ದೆಗಳಿಗೆ ಕಡಿವಾಣ ಅಗತ್ಯ: ರೈತ ಮುಖಂಡ ಹರ್ನೇಕ್ ಸಿಂಗ್

ಬೆಂಗಳೂರು, ನ. 7: `ರೈತರು ಮುಂದಿನ ದಿನಗಳಲ್ಲಿ ನೆಮ್ಮದಿಯಿಂದ ಬದುಕಬೇಕಾದರೆ, ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಈಗಿನಿಂದಲೇ ವಿರೋಧಿಸಬೇಕು' ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡ ಹರ್ನೇಕ್ ಸಿಂಗ್ ಹೇಳಿದ್ದಾರೆ.

ರವಿವಾರ ನಗರದ ಗಾಂಧಿ ಭವನದಲ್ಲಿ ಕರ್ನಾಟಕ ಜನಶಕ್ತಿ ಆಯೋಜಿಸಿದ್ದ ಐತಿಹಾಸಿಕ ರೈತಾಂದೋಲನ ಮಂಥನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, `ಕೇಂದ್ರ ಸರಕಾರ ರೈತರನ್ನು ತುಳಿಯುವ ಕೆಲಸ ಮಾಡುತ್ತಿದೆ. ಇದಕ್ಕೆ ನಾವುಗಳು ಆಸ್ಪದವನ್ನು ನೀಡಬಾರದು. ಈಗಿನಿಂದಲೇ ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಿದರೆ, ಈ ಮೂರು ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಹಿಂಪಡೆಯುವಂತೆ ಮಾಡಬಹುದು' ಎಂದು ಹೇಳಿದರು.

`ನಮ್ಮ ಹಿರಿಯ ರೈತ ಮುಖಂಡರುಗಳು ಮುಂದೊಂದು ದಿನ ರೈತರು ಹಲವು ಸಂಕಷ್ಟಗಳಿಗೆ ಈಡಾಗುತ್ತಾರೆ. ಹೀಗಾಗಿ, ಈಗಿನಿಂದಲೇ ಹೋರಾಟಕ್ಕೆ ಸಜ್ಜಾಗಿ ಎಂದು ಕರೆ ಕೊಟ್ಟಿದ್ದರು. ಅವರು ಹಾಕಿಕೊಟ್ಟ ಮಾರ್ಗದರ್ಶನದಿಂದಲೇ ಹೊಸದಿಲ್ಲಿಯ ಗಡಿಭಾಗದಲ್ಲಿ ಇಂದು ಸಾವಿರಾರು ಸಂಖ್ಯೆಯ ರೈತರು ಹೋರಾಟ ನಡೆಸಲು ಸಾಧ್ಯವಾಗಿದೆ' ಎಂದು ಅವರು ತಿಳಿಸಿದರು.
`ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದೆಂಬ ಕಾರಣಕ್ಕೆ ದಿನವನ್ನು ದೂಡುತ್ತಿದ್ದಾರೆ. ಆದರೆ, ಅವರಿಗೆ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ. ಸರಕಾರಗಳು ರೈತರ ಸಾಲವನ್ನು ಮನ್ನಾ ಮಾಡದೇ, ರೈತರನ್ನು ಇನ್ನಷ್ಟು ಬಡತನಕ್ಕೆ ನೂಕಲು ಪ್ರಯತ್ನ ಮಾಡುತ್ತಿವೆ' ಎಂದು ಆರೋಪಿಸಿದರು. 

ವಿಶ್ವದ ಎಲ್ಲ ಧರ್ಮಗಳು ಎಲ್ಲರೂ ಒಟ್ಟಾಗಿ ಶಾಂತಿಯಿಂದ ಬದುಕಬೇಕೆಂಬ ಸಂದೇಶವನ್ನು ಸಾರುತ್ತವೆ. ಆದರೆ, ಫ್ಯಾಸಿಸ್ಟ್ ಮನೋಭಾವವುಳ್ಳ ಜನರು ದಲಿತರು, ರೈತರು, ಮಹಿಳೆಯರ ಮೇಲೆ ದೌರ್ಜನ್ಯಗಳನ್ನು ಎಸಗುತ್ತಾರೆ. ಇಂತಹ ಪ್ರಜಾಪ್ರಭುತ್ವ ವಿರೋಧಿಗಳನ್ನು ನಾವುಗಳು ವಿರೋಧಿಸಬೇಕಾಗಿದೆ ಎಂದು ಹೇಳಿದರು. 

ಈ ಹಿಂದೆ ಕೃಷಿ ಬೆಳೆ ಬಂದರೆ ರೈತರು ಖುಷಿಪಡುತ್ತಿದ್ದರು. ಆದರೆ, ಈಗ ಆ ಪರಿಸ್ಥಿತಿ ಇಲ್ಲವಾಗಿದ್ದು, ಬರೀ ಸಾಲ ತೀರಿಸಲು ದುಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಅದಾನಿ, ಅಂಬಾನಿ ಅಂತಹ ಉದ್ಯಮಿದಾರರಿಗೆ ಲಾಭ ಮಾಡಿಕೊಡಲು ನಾವುಗಳು ದುಡಿಯಬೇಕಾಗಿದೆ ಎಂದು ಕಿಡಿಕಾರಿದರು.

ಪಂಜಾಬ್‍ನಲ್ಲಿ ಒಂದು ಗ್ರಾಮಕ್ಕೆ ಒಬ್ಬ ರಾಜಕೀಯ ನಾಯಕ ಬರಬೇಕೆಂದರೂ ಅಲ್ಲಿಯ ರೈತ ಮುಖಂಡನ ಅನುಮತಿಯನ್ನು ಪಡೆಯಬೇಕು. ಈ ರೀತಿಯ ಬದಲಾವಣೆಗೆ ರೈತರ ಹೋರಾಟವೇ ಪ್ರಮುಖ ಕಾರಣವಾಗಿದೆ. ನಾವುಗಳು ಕನಿಷ್ಠ ಬೆಂಬಲ ಬೆಲೆಗಾಗಿ ಕಾಯುವಂತಾಗಬಾರದು ನಮ್ಮ ಬೆಳೆಗೆ ನಾವೇ ದರವನ್ನು ನಿಗದಿಪಡಿಸವಂತಾಗಬೇಕೆಂದು ಕರೆ ನೀಡಿದರು.                           
ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡೆ ಕವಿತಾ ಕುರುಗಂಟಿ ಮಾತನಾಡಿ, ಎಪಿಎಂಸಿ ಕಾಯ್ದೆಗೆ 2020ರ ಆಗಸ್ಟ್‍ನಲ್ಲಿ ತಿದ್ದುಪಡಿ ಮಾಡಿ, ಮಾರುಕಟ್ಟೆ ಪ್ರಾಂಗಣದ ಹೊರಗೆ ಮುಕ್ತ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಅವುಗಳ ನಿರ್ವಹಣಾ ವೆಚ್ಚಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ ಎಂದು ತಿಳಿಸಿದರು.

100ಕ್ಕೆ 1.60 ಇದ್ದ ಸೆಸ್ ಅನ್ನು ಈಗ 60 ಪೈಸೆಗೆ ಇಳಿಸಿರುವುದು ಎಪಿಎಂಸಿಗಳ ಆದಾಯಕ್ಕೆ ತೊಂದರೆಯಾಗಿದೆ. ಅದನ್ನೆ ನಂಬಿಕೊಂಡಿದ್ದ ರೈತರ, ಎಪಿಎಂಸಿ ಹಮಾಲಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.       

ಹೊಸದಿಲ್ಲಿಯ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಭಾಗವಹಿಸಬೇಕು. ಇದರಿಂದ, ಚಳವಳಿಗೆ ಮತ್ತಷ್ಟು ಶಕ್ತಿ ಬರಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡೆ ಕವಿತಾ ಕುರುಗಂಟಿ, ಕರ್ನಾಟಕ ಜನಶಕ್ತಿ ಮುಖಂಡ ಕುಮಾರ್ ಸಮತಳ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ, ಡಾ.ಬಿ.ಸಿ.ಬಸವರಾಜು, ವಿ.ಗಾಯತ್ರಿ, ಟಿ.ಯಶವಂತ್ ಉಪಸ್ಥಿತರಿದ್ದರು. 

`ಇಂದಿನ ಸಂದರ್ಭದಲ್ಲಿ ಮೂರ್ಖರು ಮಾತ್ರ ನೆಮ್ಮದಿಯಿಂದ ನಿದ್ದೆ ಮಾಡಲು ಸಾಧ್ಯ, ಬುದ್ಧಿಯುಳ್ಳವರು ಸುಮ್ಮನಿರಲಾರರು. ಕೃಷಿ ಕಾಯ್ದೆಗಳನ್ನು ವಿರೋಧಿಸದಿರುವವರು ಮೂರ್ಖರ ಪಟ್ಟಿಗೆ ಬರುತ್ತಾರೆ'

-ಹರ್ನೇಕ್ ಸಿಂಗ್, ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X