ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಶಂಕರನಾರಾಯಣ, ನ.7: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಆಜ್ರಿ ಗ್ರಾಮದ ಕೇವರ್ಗಿ ನಿವಾಸಿ ಮಹೇಂದ್ರ ಕೊಠಾರಿ(27) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.6ರಂದು ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಶಂಕನಾರಾಯಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಕೋಣಿ ಗ್ರಾಮದ ಶಾಲೆ ರಸ್ತೆಯ ನಿವಾಸಿ ಬಾಬು ಶೇರಿಗಾರ(65) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.6ರಂದು ಸಂಜೆ ಮನೆಯ ಬೆಡ್ರೂಮಿನ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story