Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ಪಿಎಚ್‌ಡಿ ಅಭ್ಯರ್ಥಿಗೆ...

ಕೇರಳ: ಪಿಎಚ್‌ಡಿ ಅಭ್ಯರ್ಥಿಗೆ ಜಾತಿನಿಂದನೆ ಪ್ರಕರಣ: ಎಮ್‌ಜಿ ವಿವಿಯ ವಿಭಾಗ ಮುಖ್ಯಸ್ಥ ವಜಾ

ವಾರ್ತಾಭಾರತಿವಾರ್ತಾಭಾರತಿ7 Nov 2021 3:54 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಕೊಟ್ಟಾಯಂ,ನ.7: ಪಿಎಚ್‌ಡಿ ಅಭ್ಯರ್ಥಿಯ ವಿರುದ್ಧ ಜಾತಿ ನಿಂದನೆ ಹೇಳಿಕೆಗಳನ್ನು ನೀಡಿದ್ದ ಆರೋಪದಲ್ಲಿ ಇಲ್ಲಿಯ ಮಹಾತ್ಮಾ ಗಾಂಧಿ ವಿವಿಯು ತನ್ನ ನ್ಯಾನೋಟೆಕ್ನಾಲಜಿ ಕೇಂದ್ರದ ನಿರ್ದೇಶಕರನ್ನು ವಜಾಗೊಳಿಸಿದೆ

ವಿವಿಯ ಕೆಲವು ಅಧಿಕಾರಿಗಳ ಜಾತಿ ತಾರತಮ್ಯದಿಂದಾಗಿ ತನ್ನ ಪಿಎಚ್‌ಡಿ ಅಧ್ಯಯನವು ವಿಳಂಬಗೊಂಡಿದೆ ಎಂದು ಆರೋಪಿಸಿ ಎಮ್‌ಜಿ ವಿವಿಯ ದಲಿತ ಪಿಎಚ್‌ಡಿ ಅಭ್ಯರ್ಥಿ ದೀಪಾ ಪಿ.ಮೋಹನನ್ ಅವರು ಅ.29ರಿಂದ ಉಪವಾಸ ಮುಷ್ಕರವನ್ನು ನಡೆಸುತ್ತಿದ್ದರು.

ರಾಜ್ಯ ಸರಕಾರದ ಸೂಚನೆಯಂತೆ ನ್ಯಾನೋಟೆಕ್ನಾಲಜಿ ಕೇಂದ್ರದ ನಿರ್ದೇಶಕ ನಂದಕುಮಾರ ಅವರನ್ನು ಹುದ್ದೆಯಿಂದ ತೆರವುಗೊಳಿಸಿಲಾಗಿದೆ ಎಂದು ವಿವಿಯ ಕುಲಪತಿಗಳು ತಿಳಿಸಿದ್ದಾರೆ.

ವಿವಿ ಅಧಿಕಾರಿಗಳು ವಿದ್ಯಾರ್ಥಿನಿಯ ಪರ ನಿಲ್ಲುವುದನ್ನು,ಆಕೆಯ ದೃಷ್ಟಿಕೋನದಿಂದ ವಿಷಯವನ್ನು ಪರಿಶೀಲಿಸುವುದನ್ನು ಮತ್ತು ಆಕೆಯ ಕಳವಳಗಳನ್ನು ನಿವಾರಿಸುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರಕಾರವು ಮಧ್ಯಪ್ರವೇಶಿಸಿದೆ ಎಂದು ರವಿವಾರ ಟ್ವೀಟ್ ಮೂಲಕ ತಿಳಿಸಿರುವ ಉನ್ನತ ಶಿಕ್ಷಣ ಸಚಿವೆ ಆರ್.ಬಿಂದು ಅವರು,‘ಯಾವುದೇ ಸಾಮಾಜಿಕ ಮತ್ತು ತಾಂತ್ರಿಕ ತೊಡಕುಗಳಿಲ್ಲದೆ ತನ್ನ ಸಂಶೋಧನೆಯನ್ನು ಪೂರ್ಣಗೊಳಿಸಲು ದೀಪಾರಿಗೆ ಎಲ್ಲ ಅನುಕೂಲಗಳನ್ನು ಕಲ್ಪಿಸುವ ಭರವಸೆಯನ್ನು ವಿವಿ ನೀಡಿದೆ.

ಗ್ರಂಥಾಲಯ,ಪ್ರಯೋಗಾಲಯ ಮತ್ತು ಹಾಸ್ಟೆಲ್ ಸೇರಿದಂತೆ ಎಲ್ಲ ಅಗತ್ಯ ಮೂಲಸೌಕರ್ಯಗಳನ್ನು ಅವರು ಪಡೆಯಲಿದ್ದಾರೆ. ಸ್ವತಃ ಕುಲಪತಿಗಳೇ ಅವರಿಗೆ ಮಾರ್ಗದರ್ಶಕರಾಗಿರಲಿದ್ದಾರೆ. ದೀಪಾ ಕೂಡ ಈ ಸಲಹೆಗಳಿಗೆ ಮುಕ್ತ ಮನಸ್ಸು ಹೊಂದಿದ್ದಾರೆ. ಇವಿಷ್ಟು ಈವರೆಗೆ ನಮಗೆ ತಿಳಿದುಬಂದಿರುವ ಮಾಹಿತಿಯಾಗಿವೆ ’ಎಂದಿದ್ದಾರೆ.

ವಿದ್ಯಾರ್ಥಿಗಳ ದೂರುಗಳಿಗೆ ಸ್ಪಂದಿಸುವ ವಿಷಯದಲ್ಲಿ ಈ ಹಿಂದೆ ಉಚ್ಚ ನ್ಯಾಯಾಲಯ ಮತ್ತು ಎಸ್‌ಸಿ/ಎಸ್‌ಟಿ ಆಯೋಗ ಮಧ್ಯಪ್ರವೇಶಿಸಿವೆ ಮತ್ತು ವಿವಿಯು ಈ ಮಧ್ಯಪ್ರವೇಶಗಳನ್ನು ಪರಿಗಣಿಸಿ ದೀಪಾ ಅವರ ದೂರನ್ನು ಸಾಧ್ಯವಿದ್ದಷ್ಟು ಶೀಘ್ರ ಬಗೆಹರಿಸಲು ಪ್ರಯತ್ನಿಸಬೇಕು ಎನ್ನುವುದು ಸರಕಾರದ ಅಭಿಪ್ರಾಯವಾಗಿದೆ ಎಂದಿರುವ ಅವರು,‘ಆರೋಪಿ ಬೋಧಕರನ್ನು ಹುದ್ದೆಯಿಂದ ವಜಾಗೊಳಿಸಿದ  ಬಳಿಕ ದೂರಿನ ವಿಚಾರಣೆಯಲ್ಲಿ ಎದುರಾಗಿರುವ ಅಡಚಣೆಗಳ ಬಗ್ಗೆ ವಿವರಣೆಯನ್ನು ಸಲ್ಲಿಸುವಂತೆ ವಿವಿಗೆ ಸೂಚಿಸಲಾಗಿದೆ.

 ಸಮಸ್ಯೆಯು ತಾಂತ್ರಿಕ ಸ್ವರೂಪದ್ದಾಗಿದ್ದರೆ ಅವರು ಅಗತ್ಯ ದಾಖಲೆಯ ಬಗ್ಗೆ ನಮಗೆ ವಿವರಗಳನ್ನು ಸಲ್ಲಿಸಬಹುದು. ವಿದ್ಯಾರ್ಥಿನಿಯ ಆರೋಗ್ಯದ ಬಗ್ಗೆ ಸರಕಾರವು ಆತಂಕಗೊಂಡಿದೆ,ನನಗೂ ವೈಯಕ್ತಿಕವಾಗಿ ಆತಂಕವಾಗಿದೆ. ವಿವಿಯಿಂದ ನಮಗೆ ವಿವರಗಳು ಲಭಿಸಿದ ತಕ್ಷಣ ದೀಪಾರಿಗೆ ನ್ಯಾಯವನ್ನೊದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ’ಎಂದು ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X