ಹೈಕೋರ್ಟ್‌ನ ಮೂವರು ನೂತನ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ನ.8: ರಾಜ್ಯ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ರಾಮನಾಥ ಹೆಗಡೆ, ಸಿದ್ದಯ್ಯ ರಾಚಯ್ಯ ಹಾಗೂ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬೆಳಗ್ಗೆ ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ಕರ್ನಾಟಕದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಲ್.ಶ್ರೀನಿವಾಸ್ ಬಾಬು, ಸದಸ್ಯರು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ ಸಹಿತ ವಕೀಲ ವೃಂದದ ಗಣ್ಯರು ಉಪಸ್ಥಿತರಿದ್ದರು.






.gif)
.gif)
.gif)
.gif)
.jpeg)

