Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ.16ರಂದು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ...

ನ.16ರಂದು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರ ಪದಗ್ರಹಣ: ಶಾಸಕ ಎನ್.ಎ.ಹಾರೀಸ್

ವಾರ್ತಾಭಾರತಿವಾರ್ತಾಭಾರತಿ8 Nov 2021 5:53 PM IST
share
ನ.16ರಂದು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರ ಪದಗ್ರಹಣ: ಶಾಸಕ ಎನ್.ಎ.ಹಾರೀಸ್

ಬೆಂಗಳೂರು, ನ.8: ‘ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ.ಅಬ್ದುಲ್ ಜಬ್ಬಾರ್ ನ.16ರಂದು ಬೆಳಗ್ಗೆ 10.30ಕ್ಕೆ ನಗರದ ಅರಮನೆ ಮೈದಾನದ ನಲಪಾಡ್ ಪೆವಿಲಿಯನ್‍ನಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಶಾಸಕ ಎನ್.ಎ.ಹಾರೀಸ್ ತಿಳಿಸಿದರು.

ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಪ್‍ಗಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಲ್‍ಪಿ ನಾಯಕ ಸಿದ್ದರಾಮಯ್ಯ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಸುಮಾರು 15 ಸಾವಿರ ಜನ ಭಾಗವಹಿಸಲಿದ್ದಾರೆ ಎಂದರು.

ಅಬ್ದುಲ್ ಜಬ್ಬಾರ್ 10 ವರ್ಷಗಳ ಕಾಲ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಇಮ್ರಾನ್ ಪ್ರತಾಪ್‍ಗಡಿ ಅವರು ಜಬ್ಬಾರ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ ಎಂದು ಅವರು ತಿಳಿಸಿದರು. 

ಇತ್ತೀಚಿನ ದಿನಗಳಲ್ಲಿ ಜಾತಿ ಹಾಗೂ ಧರ್ಮದ ಮೇಲೆ ಯಾವ ರೀತಿಯ ರಾಜಕಾರಣ ನಡೆಯುತ್ತಿದೆ ಎಂದು ನಾವು ನೋಡುತ್ತಿದ್ದೇವೆ. ಜಾತ್ಯತೀತ ರಾಜಕಾರಣಕ್ಕಾಗಿ ಎಲ್ಲ ಸಮಾಜಕ್ಕೆ ಆದ್ಯತೆ ನೀಡಲು ಕಾಂಗ್ರೆಸ್ ಪಕ್ಷ ಈ ಘಟಕವನ್ನು ಸ್ಥಾಪಿಸಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಅಲ್ಪಸಂಖ್ಯಾತ ಘಟಕವನ್ನು ಮತ್ತಷ್ಟು ಬಲಪಡಿಸಲು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಹಾರೀಸ್ ಹೇಳಿದರು.

ಕಾಂಗ್ರೆಸ್ ಅಲ್ಪಸಂಖ್ಯಾತರು, ದಲಿತರು, ಕೆಳ ಹಂತದಲ್ಲಿರುವ ಸಮಾಜದವರನ್ನು ಕೈ ಹಿಡಿದು ಮೇಲೆತ್ತಲು ಶ್ರಮಿಸುತ್ತಲೇ ಬಂದಿದೆ. ಕಾಂಗ್ರೆಸ್ ಪಕ್ಷ ಈ ಸಮುದಾಯದ ಪರವಾಗಿ ಹೋರಾಡುತ್ತಿದೆ. ಈ ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ಸರಕಾರದ ವಿರುದ್ಧ ದೊಡ್ಡ ಹೋರಾಟದ ಮೂಲಕ ಜಾತ್ಯತೀತವಾಗಿ ಎಲ್ಲರನ್ನು ಒಟ್ಟಾಗಿ ಸೇರಿಸಿ ಪಕ್ಷ ಬಲಪಡಿಸಲು ಶ್ರಮಿಸುತ್ತೇವೆ ಎಂದು ಅವರು ತಿಳಿಸಿದರು.

ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ನಿಯೋಜಿತ ಅಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್ ಮಾತನಾಡಿ, ಸೋನಿಯಾ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ಆಶೀರ್ವಾದದಿಂದ ನಾನು ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷನಾಗಿ ನೇಮಕಗೊಂಡಿದ್ದೇನೆ. ನಾನು ಅಧಿಕಾರ ಸ್ವೀಕರಿಸಿದ  ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷವನ್ನು ಬಲಪಡಿಸಲು ಪ್ರಯತ್ನಿಸುತ್ತೇನೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ಕೇವಲ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಆಯ್ಕೆಯಾಗಿದ್ದು, ಇಬ್ಬರು ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಹೀಗಾಗಿ 224 ಕ್ಷೇತ್ರಗಳ ಇತರ ಕಡೆಗಳಲ್ಲೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರುವ ಕ್ರೈಸ್ತರು, ಸಿಖ್ಖರು, ಬೌದ್ಧರು ಹಾಗೂ ಇತರೆ ಸಮುದಾಯದವರು ಕೂಡ ಆಯ್ಕೆಯಾಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಎಲ್ಲೆಲ್ಲಿ ನ್ಯೂನ್ಯತೆ ಇದೆಯೋ ಅದನ್ನು ಸರಿಪಡಿಸಲು ಶ್ರಮಿಸುತ್ತೇನೆ. ಆಮೂಲಕ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಅವರು ಹೇಳಿದರು. 

ಸಿ.ಎಂ.ಇಬ್ರಾಹಿಂ ಸೇರಿದಂತೆ ಎಲ್ಲ ನಾಯಕರು ಒಗ್ಗಟ್ಟಾಗಿದ್ದಾರೆ: ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವುದಾಗಿ ಹೇಳಿಕೆ ನೀಡಿದ್ದು, ಅಲ್ಪಸಂಖ್ಯಾತರಲ್ಲೇ ಹಲವು ಗುಂಪುಗಳಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಹಾರೀಸ್, ‘ಸಿ.ಎಂ.ಇಬ್ರಾಹಿಂ ಕಾಲು ಹೊರಗಿಟ್ಟಿದ್ದಾರೋ, ಇಲ್ಲವೋ ಅದು ಅವರ ವೈಯಕ್ತಿಕ ನಿರ್ಧಾರ. ನಾವು ಅದನ್ನು ಪ್ರಶ್ನಿಸುವುದಿಲ್ಲ. ನಾವು ಎಲ್ಲರನ್ನು ಜತೆಗೂಡಿಸುವ ಕೆಲಸ ಮಾಡುತ್ತೇವೆ. ಸದ್ಯ ಪಕ್ಷದಲ್ಲಿ ನಾವು ಎಲ್ಲರೂ ಜತೆಯಾಗಿದ್ದೇವೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ತಮ್ಮ ಅಭಿಪ್ರಾಯ, ಅಸಮಾಧಾನ ಹೊರಹಾಕಬಹುದು. ಪಕ್ಷದಲ್ಲಿ ಅಲ್ಪಸಂಖ್ಯಾತರ ವಿಚಾರವಾಗಿ ತೀರ್ಮಾನ ಕೈಗೊಳ್ಳಲು ಅದಕ್ಕೆ ಆದ ಘಟಕವಿದೆ. ನಾವು ಇಬ್ರಾಹಿಂ ಅವರ ಜತೆ ಮಾತನಾಡುತ್ತಿದ್ದೇವೆ. ಜಬ್ಬಾರ್ ಅವರು ಕೂಡ ಅವರ ಜತೆ ಮಾತನಾಡುತ್ತಿದ್ದಾರೆ ಎಂದು ಹಾರೀಸ್ ತಿಳಿಸಿದರು.

ಸಿ.ಎಂ.ಇಬ್ರಾಹಿಂ ನಮ್ಮ ನಾಯಕರು. ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಯಾವುದೇ ಅನ್ಯಾಯವಾಗಿಲ್ಲ. ನಮಗೆ ನ್ಯಾಯಯುತವಾಗಿ ಸಿಗಬೇಕಾದ ಎಲ್ಲ ನ್ಯಾಯವೂ ಸಿಗುತ್ತಿದೆ. ಅಲ್ಪಸಂಖ್ಯಾತರಿಗೆ ಸರಿಯಾಗಿ ನ್ಯಾಯ ಸಿಗುತ್ತಿರುವುದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ನಾನು ಇಲ್ಲಿ ಶಾಸಕನಾಗಿ ಕೂತಿರುವುದಕ್ಕೆ ಕಾರಣ ಕಾಂಗ್ರೆಸ್. ಒಬ್ಬೊಬ್ಬ ನಾಯಕರು ತಮ್ಮ ಅಭಿಪ್ರಾಯವನ್ನು ಹೇಳಿರಬಹುದು. ಪಕ್ಷದ ವಿಚಾರ ಬಂದರೆ ನಾವೆಲ್ಲರೂ ಜತೆಯಾಗಿದ್ದೇವೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅಲ್ಪಸಂಖ್ಯಾತ ನಾಯಕರನ್ನು ಹಂತ ಹಂತವಾಗಿ ರಾಜಕೀಯವಾಗಿ ಮುಗಿಸುತ್ತಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅಲ್ಪಸಂಖ್ಯಾತ ನಾಯಕರನ್ನು ಯಾರು ಮುಗಿಸಿದ್ದಾರೆ ಎಂದು ಜನ ನೋಡಿದ್ದಾರೆ. ತಮ್ಮ ಪಕ್ಷದಲ್ಲಿದ್ದ ಅಲ್ಪಸಂಖ್ಯಾತರಿಗೆ ಅವರು ಯಾವ ಸ್ಥಾನಮಾನ ಕೊಟ್ಟಿದ್ದರು ಎಂದು ಆ ಪಕ್ಷದಲ್ಲಿದ್ದ ನಾಯಕರೇ ಹೇಳಿದ್ದಾರೆ ಎಂದು ತಿರುಗೇಟು ನೀಡಿದರು.

ಕಳೆದ ಉಪಚುನಾವಣೆಯಲ್ಲಿ ಏನಾಯಿತು ಎಂದು ನಾವೆಲ್ಲರೂ ನೋಡಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಮಾತನಾಡುವ ಸ್ವಾತಂತ್ರ್ಯ ಇದೆ. ಅದಕ್ಕಾಗಿ ಮುಕ್ತವಾಗಿ ಮಾತನಾಡುತ್ತಾರೆ. ಇದೇ ರೀತಿ ಬಿಜೆಪಿಯಲ್ಲಿ ಮಾತನಾಡಲು ಸಾಧ್ಯವೇ? ಇಲ್ಲಿ ನಮಗೆ ಸಿಗುವ ಹಕ್ಕು, ಬೇರೆಲ್ಲೂ ಸಿಗುವುದಿಲ್ಲ ಎಂಬುದು ನಮ್ಮ ಅಭಿಪ್ರಾಯ. ಸ್ಥಾನಮಾನದ ವಿಚಾರವಾಗಿ ನಾವು ಪಕ್ಷದ ಒಳಗೆ ಕೂತು ಚರ್ಚೆ ಮಾಡುತ್ತೇವೆ ಎಂದು ಹಾರೀಸ್ ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಸ್ಥಾನಮಾನ ಅಷ್ಟೇ ಅಲ್ಲ ಅವರಿಗಾಗಿ ಸರಕಾರ ಇದ್ದಾಗ ಎಷ್ಟು ಅನುದಾನ ನೀಡಿ ಯಾವ ರೀತಿ ಕಾರ್ಯಕ್ರಮ ನೀಡಲಾಗಿದೆ ಎಂಬುದು ಮುಖ್ಯ. ನಮ್ಮ ಸರಕಾರ ಇದ್ದಾಗ ನೀಡಲಾದ ಅನುದಾನ, ಈಗ ಯಾವ ರೀತಿ ಕಡಿಮೆಯಾಗಿದೆ, ಯೋಜನೆಗಳು ಯಾವ ರೀತಿ ಹಳ್ಳ ಹಿಡಿದಿವೆ, ವಿದ್ಯಾರ್ಥಿ ವೇತನ ನಿಂತಿದೆ ಎಂಬುದನ್ನು ಗಮನಿಸಬೇಕು. ಈ ಅನ್ಯಾಯವನ್ನು ಕೇಳುವ ಕೆಲಸ ಮಾಡಬೇಕಿದೆ. ವಿರೋಧ ಪಕ್ಷವಾಗಿ ನಾವು ನಮ್ಮ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ.ಬಾವಾ, ಮುಹಮ್ಮದ್ ಉಬೇದುಲ್ಲಾ ಶರೀಫ್, ಕಾರ್ಯದರ್ಶಿ ಮೆಹ್ರೊಝ್ ಖಾನ್, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಸದಸ್ಯ ಬಲ್ಜೀತ್ ಸಿಂಗ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರಕಾರದ ಬಳಿ ಅಧಿಕಾರವಿದೆ. ಅದರಂತೆ, ತನಿಖೆ ನಡೆಸಿ ಯಾವ ಪ್ರಭಾವಿ ರಾಜಕಾರಣಿಗಳು, ಅವರ ಮಕ್ಕಳು ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಸತ್ಯಾಂಶವನ್ನು ಹೊರ ತೆಗೆದು, ತಪ್ಪಿತಸ್ಥರಿಗೆ ಕಾನೂನು ರೀತಿ ಶಿಕ್ಷೆ ನೀಡಲಿ.

-ಎನ್.ಎ.ಹಾರೀಸ್, ಶಾಸಕ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X