ಸಿಂಧು, ಮೇರಿ ಕೋಮ್, ರಾಣಿ ರಾಂಪಾಲ್‌ಗೆ ಪದ್ಮ ಪ್ರಶಸ್ತಿ ಪ್ರದಾನ

ಹೊಸದಿಲ್ಲಿ, ನ.8: ರಾಷ್ಟ್ರಪತಿ ರಾಮನಾಥ ಕೋವಿಂದ್ ಸೋಮವಾರ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧುಗೆ ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು.
26 ವರ್ಷದ ಸಿಂಧು 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ ಸಿಂಗಲ್ಸ್‌ನಲ್ಲಿ ಬೆಳ್ಳಿ ಪದಕ ಮತ್ತು 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಅವರು ಈಗಾಗಲೇ 2015ರಲ್ಲಿ ಪದ್ಮಶ್ರೀ ಮತ್ತು 2016ರಲ್ಲಿ ಖೇಲ್ ರತ್ನ ಪ್ರಶಸ್ತಿಗಳನ್ನು ಗಳಿಸಿದ್ದಾರೆ.
ಸಿಂಧು 2019ರಲ್ಲಿ ಬಿಡಬ್ಲುಎಫ್ ವಿಶ್ವ ಚಾಂಪಿಯನ್‌ಶಿಪ್ಸ್ ಪ್ರಶಸ್ತಿಯನ್ನೂ ಗೆದ್ದಿದ್ದಾರೆ.
ಅದೇ ವೇಳೆ, ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಮತ್ತು ಭಾರತೀಯ ಮಹಿಳಾ ಫುಟ್ಬಾಲ್ ತಂಡದ ಆಟಗಾರ್ತಿ ಒಯಿನಮ್ ಬೆಮ್‌ಬೆಮ್ ದೇವಿ ಪದ್ಮಶ್ರೀ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ.
ಆರು ಬಾರಿಯ ವಿಶ್ವ ಚಾಂಪಿಯನ್ ಮೇರಿ ಕೋಮ್‌ಗೆ ಪದ್ಮ ವಿಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ.
Next Story





