Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೇತ್ರದಾನ ಜನಾಂದೋಲನ ಆಗಬೇಕು: ಆರೋಗ್ಯ...

ನೇತ್ರದಾನ ಜನಾಂದೋಲನ ಆಗಬೇಕು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

✍️ Anon Suf✍️ Anon Suf9 Nov 2021 6:28 PM IST
share
ನೇತ್ರದಾನ ಜನಾಂದೋಲನ ಆಗಬೇಕು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ನ.9: ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಜನಾಂದೋಲನವಾಗುವಂತೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸೋಮವಾರ ಚಾಮರಾಜಪೇಟೆಯಲ್ಲಿರುವ ಮಿಂಟೋ ಕಣ್ಣಿನ ಆಸ್ಪತ್ರೆಯ 125ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್‌ಕುಮಾರ್ ನೇತ್ರದಾನ ಮಾಡಿ ನಾಲ್ಕು ಜನರಿಗೆ ದೃಷ್ಟಿ ನೀಡಿದ್ದಾರೆ. ತಂತ್ರಜ್ಞಾನ ವಿಶಿಷ್ಟವಾಗಿ ಬೆಳೆದಿರುವುದರಿಂದ ಒಬ್ಬರು ನಾಲ್ಕು ಜನರಿಗೆ ದೃಷ್ಟಿ ನೀಡಲು ಸಾಧ್ಯವಾಗುತ್ತದೆ ಎಂದರು.

ದೇಶದಲ್ಲಿ 3-4 ಕೋಟಿ ಜನರಿಗೆ ಅಂಧತ್ವ ಇದೆ. ಆದುದರಿಂದ, ದಾನಿಗಳ ಸಂಖ್ಯೆ ಹೆಚ್ಚಬೇಕಿದೆ. ಮರಣ ಹೊಂದಿದ ನಂತರವೂ ನಾಲ್ಕು ಜನರಿಗೆ ದೃಷ್ಟಿ ನೀಡಿ ಅವರಿಗೆ ಜಗತ್ತು ನೋಡಲು ಅವಕಾಶ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ನಾನು ಕೂಡ ಕಳೆದ ವರ್ಷವೇ ನೇತ್ರದಾನ ಮಾಡಲು ಪ್ರತಿಜ್ಞೆ ಮಾಡಿದ್ದೇನೆ. ಇದನ್ನು ಆಂದೋಲನದಂತೆ ನಡೆಸಿ ನೇತ್ರದಾನದ ಬಗ್ಗೆ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.

ಕೋವಿಡ್ ಸಮಯದಲ್ಲಿ ಮಿಂಟೋ, ವಿಕ್ಟೋರಿಯಾ ಆಸ್ಪತ್ರೆಯನ್ನು ಮೀಸಲಿಡಲಾಗಿತ್ತು. ಆದರೆ ಈಗ ಎಲ್ಲ ಬಗೆಯ ಚಿಕಿತ್ಸೆ ನೀಡಲಾಗುತ್ತಿದೆ. ಜನರು ಧೈರ್ಯವಾಗಿ ಬಂದು ಇತರೆ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಬಹುದು. ಅನೇಕ ವೈದ್ಯರು, ಶುಶ್ರೂಷಕರು, ವೈದ್ಯಕೀಯೇತರ ಸಿಬ್ಬಂದಿಯ ಶ್ರಮದಿಂದಾಗಿ ಮಿಂಟೋ ಕಣ್ಣಾಸ್ಪತ್ರೆಯು 125 ನೇ ವರ್ಷಕ್ಕೆ ಕಾಲಿಟ್ಟಿದೆ. ಇಂತಹ ಸಂಸ್ಥೆ ಇರುವುದು ರಾಜ್ಯಕ್ಕೆ ಹೆಮ್ಮೆಯ ವಿಚಾರ ಎಂದು ಅವರು ಹೇಳಿದರು.

1896 ರಲ್ಲಿ ಡಿಸ್ಪೆನ್ಸರಿಯಾಗಿ ಆರಂಭವಾದ ಸಂಸ್ಥೆ 125 ವರ್ಷದವರೆಗೂ ಸೇವೆ ನೀಡಿದೆ. ಪ್ಲೇಗ್‌ನಿಂದ ಆರಂಭವಾಗಿ ಇತ್ತೀಚೆಗೆ ಕೋವಿಡ್ ತಡೆಗಟ್ಟುವವರೆಗೂ ಈ ಸಂಸ್ಥೆ ಕಾರ್ಯನಿರ್ವಹಿಸಿದೆ. ಇಂದು ಒಪಿಡಿಗೆ ಸುಮಾರು 800 ರೋಗಿಗಳು ಬರುತ್ತಿದ್ದಾರೆ. ವರ್ಷಕ್ಕೆ ಸುಮಾರು 10 ಸಾವಿರ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೋವಿಡ್ ಲಸಿಕೆ: ರಾಜ್ಯದಲ್ಲಿ ಕೊರೋನ ಲಸಿಕೆಯ ಮೊದಲ ಡೋಸ್ ಶೇ.89 ಹಾಗೂ ಎರಡನೇ ಡೋಸ್ ಶೇ.48 ರಷ್ಟು ಪ್ರಗತಿ ಕಂಡಿದೆ. ಎರಡನೇ ಡೋಸ್ ಪಡೆಯಲು ಜನರು ಉದಾಸೀನ ಮಾಡಬಾರದು. ಕೋವಿಡ್ ವಿರುದ್ಧ ಸಂಪೂರ್ಣ ರೋಗ ನಿರೋಧಕ ಶಕ್ತಿ ಬರಲು ಎರಡೂ ಡೋಸ್ ಪಡೆಯಬೇಕು. ಕೋವಿಡ್ ಸಂಪೂರ್ಣ ನಿರ್ಮೂಲನೆಯಾಗುವವರೆಗೂ ಎಚ್ಚರವಾಗಿರಬೇಕು ಎಂದು ಸುಧಾಕರ್ ತಿಳಿಸಿದರು.

ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ಮಕ್ಕಳ ಲಸಿಕೆ ನೀಡಲಿದೆ. ಮಕ್ಕಳಲ್ಲಿ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು. ಆರೋಗ್ಯ ನಂದನ ಕಾರ್ಯಕ್ರಮದಡಿ ಈಗಾಗಲೇ ಆರೋಗ್ಯ ಶಿಬಿರ ಮಾಡಿ ಪಟ್ಟಿ ಮಾಡಲಾಗಿದೆ. ಮುಂದಿನ ವಾರ ಲಸಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಆರೂಮುಕ್ಕಾಲು ಕೋಟಿ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗಿದೆ. ಲಸಿಕೆ ವಿತರಣೆ ಈಗ ಕಷ್ಟದ ವಿಚಾರವಲ್ಲ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಚಾಮರಾಜಪೇಟೆ ಕ್ಷೇತ್ರದ ಶಾಸಕ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
✍️ Anon Suf
✍️ Anon Suf
Next Story
X