ಜೀವನ ಶೈಲಿಯಲ್ಲಿ ಆಹಾರ ಕುರಿತು ವಿಚಾರ ಸಂಕಿರಣ

ಉಡುಪಿ, ನ.9: ಉದ್ಯಾವರ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ರಾಷ್ಟ್ರೀಯ ಆಯುರ್ವೇದ ದಿನದ ಅಂಗವಾಗಿ ಇತ್ತೀಚೆಗೆ ಪ್ರಸ್ತುತ ಜೀವನಶೈಲಿಯಲ್ಲಿ ಆಹಾರ ಮತ್ತು ಆರೋಗ್ಯ ವಿಷಯದ ಬಗ್ಗೆ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಹಾಗೂ ಯೋಗ ಕಾಲೇಜಿನ ಡೀನ್ ಡಾ.ಗೀತಾ ಬಿ.ಶೆಟ್ಟಿ ಮಾತನಾಡಿದರು. ಅಧ್ಯಕ್ಷತೆ ಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ವಹಿಸಿದ್ದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಎಸ್., ಸ್ನಾತಕೋತ್ತರ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ನಿರಂಜನ್ ರಾವ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ವೀರ ಕುಮಾರ ಕೆ. ಉಪಸ್ಥಿತರಿದ್ದರು.
ಬಾಲರೋಗ ವಿಭಾಗ ಮುಖ್ಯಸ್ಥ ಡಾ.ಪೃಥ್ವಿರಾಜ್ ಪುರಾಣಿಕ್ ಸ್ವಾಗತಿಸಿದರು. ಸಹ ಪ್ರಾಧ್ಯಾಪಕ ಡಾ.ಶರಶ್ಚಂದ್ರ ವಂದಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ.ನಾಗರತ್ನ ಹಾಗೂ ಡಾ.ಚಿತ್ರಲೇಖ ಸಹಕರಿಸಿದರು. ಡಾ.ಐಶ್ವರ್ಯ ಕಾರ್ಯಕ್ರಮ ನಿರೂಪಿಸಿದರು.
Next Story





