Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮತ ಪಟ್ಟಿ ಪರಿಷ್ಕರಣೆಯಲ್ಲಿ ಯುವ ಮತದಾರರ...

ಮತ ಪಟ್ಟಿ ಪರಿಷ್ಕರಣೆಯಲ್ಲಿ ಯುವ ಮತದಾರರ ಸೇರ್ಪಡೆಗೆ ಅಭಿಯಾನ: ಡಿಸಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ9 Nov 2021 9:33 PM IST
share
ಮತ ಪಟ್ಟಿ ಪರಿಷ್ಕರಣೆಯಲ್ಲಿ ಯುವ ಮತದಾರರ ಸೇರ್ಪಡೆಗೆ ಅಭಿಯಾನ: ಡಿಸಿ ಕೂರ್ಮಾರಾವ್

ಉಡುಪಿ, ನ.9: 2022ರ ಜನವರಿ 1ನ್ನು ಅರ್ಹತಾ ದಿನವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಈಗ ನಡೆಯುತಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಜಿಲ್ಲೆಯ ಎಲ್ಲಾ ಕಾಲೇಜುಗಳ ಮೂಲಕ ಅಭಿಯಾನ ನಡೆಸಲಾಗುವುದು ಎಂದು ಜಿ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆಯ ಕುರಿತು ವಿವರಗಳನ್ನು ನೀಡಿದರು.

ಉಡುಪಿ ಜಿಲ್ಲೆಯ ಜನಸಂಖ್ಯೆ ಅಂದಾಜು 12,55,000 ಆಗಿದ್ದು, ಇದರಲ್ಲಿ ಇಂದು ಪ್ರಕಟಿಸಲಾದ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿರುವ ಒಟ್ಟು ಮತದಾರರ ಸಂಖ್ಯೆ 10,21,188 ಆಗಿದೆ. ಇವರಲ್ಲಿ 4,92,400 ಪುರುಷ, 5,28,777 ಮಹಿಳಾ ಹಾಗೂ 11 ಇತರೆ ಮತದಾರರಿದ್ದಾರೆ.

ಜಿಲ್ಲೆಯ ಬೈಂದೂರು ಕ್ಷೇತ್ರದಲ್ಲಿ 2,30,847 ಮತದಾರರು, ಕುಂದಾಪುರ ಕ್ಷೇತ್ರದಲ್ಲಿ 2,04,865, ಉಡುಪಿ ಕ್ಷೇತ್ರದಲ್ಲಿ 2,12,483, ಕಾಪು ಕ್ಷೇತ್ರದಲ್ಲಿ 1,87,435 ಹಾಗೂ ಕಾರ್ಕಳ ಕ್ಷೇತ್ರದಲ್ಲಿ 1,85,558 ಮತದಾರರು ಕರಡು ಮತದಾರರ ಪಟಿ್ಟಯಲ್ಲಿದ್ದಾರೆ ಎಂದವರು ಹೇಳಿದರು.

22,000 ಹೊಸ ಮತದಾರರ ಸೇರ್ಪಡೆ ಗುರಿ: ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ಪ್ರಸಕ್ತ ಜನಸಂಖ್ಯೆಗೆ ಅನುಗುಣವಾಗಿ 27,000 ಯುವ ಮತದಾರರ ನೋಂದಣಿ ಆಗಬೇಕಿದ್ದು, ಈವರೆಗೆ 4,139 ಮಂದಿ ಯುವ ಮತದಾರರ ಸೇರ್ಪಡೆ ಮಾತ್ರ ಆಗಿದೆ. ಆದ್ದರಿಂದ ಈ ಬಾರಿಯ ಅಭಿಯಾನದಲ್ಲಿ 22,000ದಷ್ಟು ಯುವ ಮತದಾರರ ಸೇರ್ಪಡೆಯ ಗುರಿಯನ್ನು ಇರಿಸಿಕೊಳ್ಳಲಾಗಿದೆ ಎಂದು ಕೂರ್ಮಾರಾವ್ ತಿಳಿಸಿದರು.

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ 18 ವರ್ಷ ತುಂಬಿದ ಯುವಕ/ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಾರ್ಯಕ್ರಮ ರೂಪಿಸಲಾ ಗುವುದು. ಯುವ ಜನತೆ ತಾವು ವಾಸವಿರುವ ವಿಳಾಸದ ವ್ಯಾಪ್ತಿಗೆ ಬರುವ ಬಿಎಲ್‌ಓ ಗಳನ್ನು ಭೇಟಿ ಮಾಡಿ ಅರ್ಜಿಗಳನ್ನು ಸಲ್ಲಿಸಬಹುದು ಅಥವಾ ಆನ್‌ಲೈನ್ ವೆಬ್‌ಪೋರ್ಟಲ್ -   www.nvsp.in- ಹಾಗೂ ವೋಟರ್ಸ್‌ ಹೆಲ್ಫ್‌ಲೈನ್ ಆ್ಯಪ್ ಮೂಲಕ ಸಹ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗಳನ್ನು ಮಾಡಲು ಅವಕಾಶಗಳಿವೆ. ಈ ಸೌಲಭ್ಯದ ಸದುಪಯೋಗ ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ  ನ.8ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ನ. 8ರಿಂದ ಡಿಸೆಂಬರ್ 8ರವರೆಗೆ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ. ನ.7, 14, 21 ಮತ್ತು 28ರ ರವಿವಾರ ಗಳಂದು ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ನೊಂದಣಿ ಕಾರ್ಯಕ್ರಮ ನಡೆಯಲಿದ್ದು, ಈ ಅವಧಿಯಲ್ಲಿ ಎಲ್ಲಾ ಬಿಎಲ್‌ಓಗಳು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮತಗಟ್ಟೆಯಲ್ಲಿ ಹಾಜರಿರುತ್ತಾರೆ. ಡಿ.27ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಮಾಡಲಾಗುತ್ತದೆ. ಹಾಗೂ 2022ರ ಜ.13ರಂದು ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಕೂರ್ಮಾರಾವ್ ವಿವರಿಸಿದರು.

ಅಭಿಯಾನದ ವೇಳೆ ಅರ್ಜಿ ನಮೂನೆ- 6ರಲ್ಲಿ 18 ವಷರ್ ಪೂರೈಸಿದ ಹೊಸ ಮತದಾರರು ಹಾಗೂ ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದೆಡೆ ವಾಸಸ್ಥಳ ಬದಲಾಯಿಸಿದವರು, ವಿದೇಶದಲ್ಲಿ ವಾಸಿಸುವವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು, ನಮೂನೆ-6ಎಯಲ್ಲಿ ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಲು, ನಮೂನೆ -7ರಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು, ನಮೂನೆ-8ರಲ್ಲಿ ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದಂತೆ ದೋಷಗಳಿದ್ದರೆ ಸರಿಪಡಿಸಲು ಹಾಗೂ ನಮೂನೆ-8ಎಯಲ್ಲಿ ಒಂದು ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭದಲ್ಲಿ ಅರ್ಜಿ ಸಲ್ಲಿಸಬೇಕು.

ಸಾರ್ವಜನಿಕರು ತಾಲೂಕು ಕಛೇರಿ ಉಡುಪಿ, ಕಾಪು, ಕಾರ್ಕಳ, ಕುಂದಾಪುರ, ಬೈಂದೂರು, ಬ್ರಹ್ಮಾವರ, ಹೆಬ್ರಿ ಇಲ್ಲಿಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು. ಮತದಾರರ ಪಟ್ಟಿಗೆ ಹೆಸರು ನೊಂದಾಯಿಸುವ ಯುವ ಮತದಾರರು ವಯಸ್ಸಿನ ಬಗ್ಗೆ ದಾಖಲೆ ಹಾಗೂ ವಾಸ್ತವ್ಯದ ಬಗ್ಗೆ ದಾಖಲೆಗಳನ್ನು ಸಲ್ಲಿಬೇಕು ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X