Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಂದೇ ವೇದಿಕೆ ಹಂಚಿಕೊಂಡ ವಿಪಕ್ಷ ನಾಯಕ...

ಒಂದೇ ವೇದಿಕೆ ಹಂಚಿಕೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಜಿ.ಟಿ. ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ9 Nov 2021 10:11 PM IST
share
ಒಂದೇ ವೇದಿಕೆ ಹಂಚಿಕೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಜಿ.ಟಿ. ದೇವೇಗೌಡ

ಮೈಸೂರು,ನ.9: ಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ವಿರೋಧಿಗಳಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜ.ಟಿ.ದೇವೇಗೌಡ ಒಂದೇ ವೇದಿಕೆಯಲ್ಲಿ ಕುರ್ಚಿ ಹಂಚಿಕೊಳ್ಳವ ಮೂಲಕ ಒಬ್ಬರಿಗೊಬ್ಬರು ಗುಣಗಾನ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಹಿನಕಲ್‌ನಲ್ಲಿ ನಡೆದ ಅಂಬೇಡ್ಕರ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಮಂಗಳವಾರ ಈ ಇಬ್ಬರು ನಾಯಕರು ಭಾಗಿಯಾಗಿದ್ದಾರೆ. 

ಮೈಸೂರಿನ ಕೇರ್ಗಳ್ಳಿ ಹೊಂಬಾಳಮ್ಮ ಸಿದ್ದರಾಮೇಶ್ವರ ಸಮುದಾಯ ಭವನ ಉದ್ಘಾಟನೆಯಲ್ಲಿ ಕೂಡ ಸಿದ್ದರಾಮಯ್ಯ ಹಾಗೂ ಜಿ.ಟಿ.ದೇವೇಗೌಡರು ವೇದಿಕೆ ಹಂಚಿಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ಕ್ಷೇತ್ರಕ್ಕೆ ಬರೋದಕ್ಕೆ ತುಂಬಾ ಬೇಸರ ಆಗಿತ್ತು. ಹಲವು ದಿನಗಳ ಬಳಿಕ ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಿದ್ದೇನೆ. ಚುನಾವಣೆಯಲ್ಲಿ ನಾನು ಜಿ.ಟಿ. ದೇವೇಗೌಡ ಪರಸ್ಪರ ಎದುರಾಗಿದ್ದೆವು. ಚುನಾವಣೆಯಲ್ಲಿ ನನ್ನನ್ನೇ ಸೋಲಿಸಿದ್ದ ಗಿರಾಕಿ ಈತ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಸೋತ ಬಳಿಕ ಇಬ್ಬರೂ ಒಂದೇ ವೇದಿಕೆಯಲ್ಲಿ ಕುಳಿತುಕೊಳ್ಳುವ ಬಗ್ಗೆ ಸಾಕಷ್ಟು ಕುತೂಹಲ ಇತ್ತು. ಆದರೆ ಜನರು ಕರೆದ ಮೇಲೆ ಒಂದೇ ವೇದಿಕೆಗೆ ಬರಲೇ ಬೇಕು. ಜಿ.ಟಿ. ದೇವೇಗೌಡ ಕಾಂಗ್ರೆಸ್ ಗೆ ಬಂದಿದ್ದಾನೆ ಅಂತಾ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಜಿ.ಟಿ. ದೇವೇಗೌಡಗೆ ಕಾಂಗ್ರೆಸ್ ಬರೋದಿಕ್ಕೆ ಮನಸ್ಸು ಇದೆ. ಆದರೆ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅಲ್ಲಿಯೇ ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ವರ್ಷಗಳ ಇತಿಹಾಸ ಇದೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಒಪ್ಪಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬರೋದಾದರೆ ಬರಬಹುದು. ಯಾರೇ ಬಂದರು ಪಕ್ಷಕ್ಕೆ ಸ್ವಾಗತ ಎಂದು ಸಿದ್ದರಾಮಯ್ಯ ಅವರು ಜಿ.ಟಿ.ದೇವೇಗೌಡರಿಗೆ ಕಾಂಗ್ರೆಸ್ ಸೇರಲು ಬಹಿರಂಗವಾಗಿಯೇ ಆಹ್ವಾನ ನೀಡಿದರು.

ಕಾರ್ಯಕ್ರಮದಲ್ಲಿ ಜ್ಞಾನಪ್ರಕಾಶ್ ಸ್ವಾಮೀಜಿ, ಮಾಜಿ ಮೇಯರ್ ಪುರುಷೋತ್ತಮ್, ಕಾಂಗ್ರೆಸ್ ಮುಖಂಡರುಗಳಾದ ಕೆ.ಮರೀಗೌಡ, ರಾಕೇಶ್ ಪಾಪಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X