Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ...

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ: ಎಂ.ಪಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ9 Nov 2021 10:41 PM IST
share
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ: ಎಂ.ಪಿ.ಕುಮಾರಸ್ವಾಮಿ

ಕೋಲಾರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಬೇಕು ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಜನಾಂಗಕ್ಕೆ ಮೀಸಲಿಟ್ಟ ಅನುದಾನವನ್ನು ಆ ವರ್ಷವೇ ಬಳಕೆ ಮಾಡಬೇಕು ಎಂದು ಅನುಸೂಚಿತ ಜಾತಿ ಮತ್ತು ಪಂಗಡದ ಕಲ್ಯಾಣ ಸಮಿತಿಯ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನುಸೂಚಿತ ಜಾತಿ ಮತ್ತು ಪಂಗಡದ ಕಲ್ಯಾಣ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಬ್ಯಾಂಕ್‌ಗಳು ಪಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡುವಲ್ಲಿ ವಿಳಂಬ ನೀತಿಯನ್ನು ಅನುಸರಿಸಬಾರದು. ಪರಿಶಿಷ್ಡ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆಯಾಗಬೇಕು ಹಾಗೂ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರೆಯಬೇಕು. ವಿದವಾ ಪುರ್ನವಿವಾಹ ಗಾಂಧಿಜೀಯವರ ಕಲ್ಪನೆಯಾಗಿದ್ದು ವಿದವಾ ಪುರ್ನವಿವಾಹಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಅವರು ತಿಳಿಸಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ದೊರೆಯುವ ಸರ್ಕಾರದ ಯೋಜನೆ, ಸೌಲಭ್ಯಗಳಲ್ಲಿ ಯಾವುದೇ ರೀತಿಯ ಆಕ್ರಮಗಳು ನಡೆಯಬಾರದು. 94ಸಿ ಅಡಿಯಲ್ಲಿ ಬಾಕಿ ಇರುವ ಅರ್ಜಿಗಳನ್ನು ಶಿಘ್ರವಾಗಿ ಇತ್ಯರ್ಥ ಪಡಿಸಿ. ಜನರಿಗೆ ಪುನರ್ ವಸತಿ ಸೌಲಭ್ಯಗಳನ್ನು ಕಲ್ಪಿಸಬೇಕು ಹಾಗೂ ಜಿಲ್ಲೆಯಲ್ಲಿ ಸ್ಲಂಗಳು ಇಲ್ಲದಂತೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.ಅನುಸೂಚಿತ ಜಾತಿ ಮತ್ತು ಪಂಗಡದ ಕಲ್ಯಾಣ ಸಮಿತಿಯ ಸದಸ್ಯ ಹೆಚ್.ಕೆ.ಕುಮಾರಸ್ವಾಮಿ ಮಾತನಾಡಿ, ಜಿಲ್ಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರವಾಗಿದೆ. ಜಿಲ್ಲೆಯಲ್ಲಿ ಎಸ್.ಸಿ ಮತ್ತು ಎಸ್.ಟಿ ಜನಾಂಗದ ಜನರು ಹೆಚ್ಚಾಗಿದ್ದಾರೆ. ಅಂರ್ತಜಾತಿ ವಿವಾಹವಾದ ಪ್ರತಿಯೊಬ್ಬರಿಗೂ ಪ್ರೋತ್ಸಾಹಧನ ಸಕಾಲದಲ್ಲಿ ವಿತರಿಸಿ. ಜಿಲ್ಲೆಯಲ್ಲಿ ನೀರು 1000 ದಿಂದ 1200 ಅಡಿಗೆ ದೊರೆಯುತ್ತಿದೆ, ಗಂಗಾ ಕಲ್ಯಾಣ ಯೋಜನೆಯಾಡಿ ನೀಡುವ ಅನುದಾನವನ್ನು ಹೆಚ್ಚಳ ಮಾಡಬೇಕು ಎಂದು ಅವರು ತಿಳಿಸಿದರು.ಅ

ನುಸೂಚಿತ ಜಾತಿ ಮತ್ತು ಪಂಗಡದ ಕಲ್ಯಾಣ ಸಮಿತಿಯ ಸದಸ್ಯ ಹೆಚ್.ಎಂ.ರಮೇಶ್‌ಗೌಡ ಅವರು ಮಾತನಾಡಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಪ್ರತ್ಯೇಕ ಸ್ಮಶಾನ ಭೂಮಿ ನೀಡಲು ಅವಕಾಶವಿದ್ದು ಎಲ್ಲಾ ಗ್ರಾಮಗಳಲ್ಲಿ ಸ್ಮಶಾನಗಳಿಗೆ ಭೂಮಿಯನ್ನು ತಹಶೀಲ್ದಾರ್ ಅವರು ಗುರ್ತಿಸಿ ನೀಡಿ. 94ಸಿ ಅಡಿಯಲ್ಲಿ ಎಲ್ಲಾ ಬಡವರು ಅರ್ಜಿ ಸಲ್ಲಿಸಿರುತ್ತಾರೆ. ಯಾರು ಕಡು ಬಡವರಿರುತ್ತಾರೆ ಅವರನ್ನು ಗುರುತಿಸಿ ಸೌಲಭ್ಯಗಳನ್ನು ನೀಡಿ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ಅವರು ಜಿಲ್ಲೆಗೆ ಎಸ್.ಸಿ.ಪಿ ಟಿ.ಎಸ್.ಪಿ ಅಡಿ ಬಿಡುಗಡೆಯಾಗಿರುವ ಅನುದಾನದಲ್ಲಿ ಶೇಕಡ 95 ರಷ್ಟು ಅನುದಾನವನ್ನು ಬಳಕೆ ಮಾಡಲಾಗಿದೆ. ದೌರ್ಜನ್ಯ ಪ್ರಕರಣಗಳಲ್ಲಿ ದೌರ್ಜನ್ಯಕ್ಕೆ ಒಳಗಾದವರಿಗೆ ಪರಿಹಾರ ನೀಡಲಾಗಿದೆ. 2020-21 ನೇ ಸಾಲಿನಲ್ಲಿ 64 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಸ್ಮಶಾನ ಭೂಮಿಯನ್ನು ನೀಡಲಾಗಿದೆ. ಕೋಲಾರ ಜಿಲ್ಲೆಯು 2019 ರಲ್ಲಿ ಬಯಲು ಬರ್ಹಿದೇಸೆ ಮುಕ್ತ ಜಿಲ್ಲೆಯಾಗಿದೆ. 156 ಗ್ರಾಮ ಪಂಚಾಯಿತಿಗಳಿಗೆ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲು ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ  ಅನುಸೂಚಿತ ಜಾತಿ ಮತ್ತು ಪಂಗಡದ ಕಲ್ಯಾಣ ಸಮಿತಿಯ ಸದಸ್ಯ ಅವಿನಾಶ್ ಉಮೇಶ್ ಜಾವೇದ್, ಸಂಜೀವ ಮಠಂದೂರು, ಬಿ.ಹರ್ಷವರ್ಧನ್, ತಳವಾರ್ ಶಿವಣ್ಣ, ಅದೀನ ಕಾರ್ಯದರ್ಶಿ ಪ್ರಶಾಂತ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಉಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶಿಲ್ದಾರರು ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X