Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಡಿಕೆ ಹಾನಿಕಾರಕವಲ್ಲ, ಸಂಸದ ನಿಶಿಕಾಂತ್...

ಅಡಿಕೆ ಹಾನಿಕಾರಕವಲ್ಲ, ಸಂಸದ ನಿಶಿಕಾಂತ್ ದುಬೆ ಹೇಳಿಕೆ ಖಂಡಿನೀಯ: ಕ್ಯಾಂಪ್ಕೊ

ವೈಜ್ಞಾನಿಕ ಸಂಶೋಧನೆ ನಡೆಸಲಲು ಸೂಚಿಸುವಂತೆ ಪ್ರಧಾನಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ9 Nov 2021 10:58 PM IST
share

ಮಂಗಳೂರು, ನ.9: ಯಾವುದೇ ವೈಜ್ಞಾನಿಕ ಪುರಾವೆಗಳಲ್ಲಿದೆ ಮಾನವನ ಆರೋಗ್ಯದ ಮೇಲೆ ಅಡಿಕೆ ಹಾನಿಕಾರಕ ಅದನ್ನು ನಿಷೇಧಿಸಬೇಕು ಎಂದು ಜಾರ್ಖಂಡ್‌ನ ಗೊಡ್ಡ ಸಂಸದ ನಿಶಿಕಾಂತ್ ದುಬೆ ಪ್ರಧಾನಿಯವರಿಗೆ ಮನವಿ ಮಾಡಿರುವ ಅವರ ನಡೆಯನ್ನು ಕ್ಯಾಂಪ್ಕೊ ಖಂಡಿಸಿದೆ. ಅಲ್ಲದೆ ಇದು ಜನರನ್ನು ತಪ್ಪು ದಾರಿಗೆಳೆಯುವ ಮಾತ್ರವಲ್ಲದೆ ಅಡಿಕೆ ರೈತರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಕ್ಯಾಂಪ್ಕೊ ಹೇಳಿದೆ.

ಅಡಿಕೆ ಸೇವನೆ ಮಾನವನ ಆರೋಗ್ಯಕ್ಕೆ ಹಾನಿಕರವಲ್ಲ ಎಂಬುದನ್ನು ಹಲವು ಸಂಶೋಧನೆಗಳನ್ನು ಸಾಬೀತುಪಡಿಸಿದರೂ ''ಜನ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುವುದನ್ನು ತಡೆಯಲು ಅಡಿಕೆ ಸೇವನೆ ನಿಷೇಧಿಸಬೇಕು'' ಎಂದು ಜಾರ್ಖಂಡ್‌ನ ಗೊಡ್ಡ ಸಂಸದ ನಿಶಿಕಾಂತ್ ದುಬೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದರು.

ಅಡಿಕೆ ಎಲ್ಲಾ ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಬಹಳ ಮಹತ್ವದ ಸ್ಥಾನವನ್ನು ಪಡೆಯುತ್ತದೆ. ಚರಕ ಸಂಹಿತೆಯಷ್ಟು ಹಿಂದಿನ ಆಯುರ್ವೇದ ಔಷಧದಲ್ಲಿ ಸುದೀರ್ಘ ಇತಿಹಾಸವನ್ನು ಹೊಂದಿದೆ. ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಅಡಿಕೆ ಬೆಳೆಯುವ ದೇಶವಾಗಿದೆ.

ಅಡಿಕೆ ಮನುಷ್ಯರಿಗೆ ಮತ್ತು ಜಾನುವಾರುಗಳಿಗೆ ಬೇಕಾದ ಔಷಧೀಯ ಗುಣಗಳನ್ನು ಹೊಂದಿರುವ ಒಂದು ಪದಾರ್ಥ. ಅಡಿಕೆ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಮಧುಮೇಹ, ಕೊಲೆಸ್ಟ್ರಾಲ್, ಮರೆವು ಕಾಯಿಲೆ, ಹಲವಾರು ಅನುಪಯುಕ್ತ ಬ್ಯಾಕ್ಟೀರಿಯಾ, ಶಿಲೀಂಧ್ರಗಳು, ಪ್ರೊಟೊಜೋವನ್ ಪರಾವಲಂಬಿಗಳು ಇತ್ಯಾದಿಗಳನ್ನು ಸವಾರಿಸುವ ಶಕ್ತಿಯನ್ನು ಹೊಂದಿದೆ. ಇದು ಎಚ್‌ಐವಿ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿದ್ದು, ಆಂಟಿಮಲೇರಿಯಲ್, ಆಂಥೆಲ್ಮಿಂಟಿಕ್ ಗುಣಲಕ್ಷಣಗಳನ್ನು ಸಹ ಹೊಂದಿದೆ. ಅಡಿಕೆ ನೋವನ್ನು ಕಡಿಮೆ ಮಾಡಲು ಮತ್ತು ಗಾಯಗಳು ಮತ್ತು ಹುಣ್ಣುಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ.
ಅಡಿಕೆ ಮಾತ್ರ ಕ್ಯಾನ್ಸರ್ ಕಾರಕವಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗಿದೆ. ದೇಶೀಯ ಮತ್ತು ಅಂತರ್‌ರಾಷ್ಟ್ರೀಯ ಸಮರ್ಥ ಸಂಶೋಧನಾ ಸಂಸ್ಥೆಗಳು ನಡೆಸಿದ ಇತ್ತೀಚಿನ ಸಂಶೋಧನೆಗಳು ಸಕಾರಾತ್ಮಕ ಫಲಿತಾಂಶಗಳನ್ನು ಸಾಬೀತುಪಡಿಸಿವೆ. 1974 ರಲ್ಲಿ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಅಡಿಕೆ ಕ್ಯಾನ್ಸರ್ ಅನ್ನು ಗುಣಪಡಿಸುತ್ತದೆ ಎಂದು ವರದಿ ಮಾಡಿದ್ದಾರೆ.

ಅಮೇರಿಕಾ, ಅಟ್ಲಾಂಟಾ, ಎಮೋರಿ ವಿಶ್ವವಿದ್ಯಾನಿಲಯದ ವಿನ್ಶಿಪ್ ಕ್ಯಾನ್ಸರ್ ಇನ್ ಸ್ಟಿಟ್ಯೂಟ್ ನ ಪ್ರಖ್ಯಾತ ವಿಜ್ಞಾನಿಗಳ ಗುಂಪಿನಿಂದಲೂ ಇದನ್ನು ದೃಢೀಕರಿಸಲಾಗಿದೆ. ಚೀನಾದಲ್ಲಿ, ಈಗಾಗಲೇ ಅಡಿಕೆ ಬಳಸಿ 30 ಕ್ಕೂ ಹೆಚ್ಚು ಔಷಧಗಳನ್ನು ತಯಾರಿಸಲಾಗಿದೆ ಮತ್ತು 'ಮೆಟೀರಿಯಾ ಮೆಡಿಕಾ’ ದಲ್ಲಿ ವರದಿ ಮಾಡಿದಂತೆ ಈಗಲೂ ಅಭ್ಯಾಸ ಮಾಡಲಾಗುತ್ತಿದೆ. ಆ ಮಟ್ಟಿಗೆ ಈಗಾಗಲೇ ಸಂಶೋಧನೆಯ ಕಾರ್ಯಗಳಿಗೆ ಕ್ರಮಗಳನ್ನು ಪ್ರಾರಂಭಿಸಿದೆ ಮತ್ತು ಅಂತರ್‌ ರಾಷ್ಟ್ರೀಯ ಖ್ಯಾತಿಯನ್ನು ಹೊಂದಿರುವ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳಿಗೆ ಅದನ್ನು ಮಂಜೂರು ಮಾಡಿದೆ. ಆಹಾರ ಕಲಬೆರಕೆ ತಡೆ ಕಾಯ್ದೆಯ ಸೆಕ್ಷನ್-2ರ ಅರ್ಥದಲ್ಲಿ ಅರೆಕಾನಟ್ ಆಹಾರ ಎಂದು ಸುಪ್ರೀಂ ಕೋರ್ಟ್ ಕೂಡ ತೀರ್ಪು ನೀಡಿದೆ ಎಂದು ಕ್ಯಾಂಪ್ಕೊ ತಮ್ಮ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಧಾನಿಗೆ ಮನವಿ: ಅಡಿಕೆಯ ಆರೋಗ್ಯ ಪ್ರಯೋಜನಗಳ ಕುರಿತು ಸಂಪೂರ್ಣ ವೈಜ್ಞಾನಿಕ ಸಂಶೋಧನೆಯನ್ನು ನಡೆಸಲು ಮತ್ತು ರೈತರ ನೈತಿಕತೆಯನ್ನು ಕಾಪಾಡಿಕೊಳ್ಳಲು ಸಂಬಂಧಿಸಿದ ಕಚೇರಿಗಳಿಗೆ ಸೂಚನೆಗಳನ್ನು ನೀಡುವಂತೆ ಪ್ರಧಾನಮಂತ್ರಿಗೆ ಮನವಿ ಮಾಡಲಾಗುವುದು ಎಂದು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಗಿ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ. ಕೃಷ್ಣ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X