'ಸಿದ್ದರಾಮಯ್ಯ ಕುರಿತು ಅಪಪ್ರಚಾರ ನಿಲ್ಲಿಸಿ': ಬಿಜೆಪಿ ನಾಯಕರ ಹೇಳಿಕೆಗಳನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಲಿತ ವಿರೋಧಿ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರ ಹೇಳಿಕೆಗಳನ್ನು ಖಂಡಿಸಿ ಕೆಪಿಸಿಸಿ ಮಹಿಳಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು.
ಮಂಗಳವಾರ ನಗರದ ಮೈಸೂರ್ ಬ್ಯಾಂಕ್ ಬಳಿ ಕೆಪಿಸಿಸಿ ಮಹಿಳಾ ಘಟಕದ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಮಹಿಳಾ ಸದಸ್ಯರು, ಬಿಜೆಪಿ ನಿಜವಾಗಿ ದಲಿತ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರ ಸರಕಾರದ ಅವಧಿಯಲ್ಲಿ ಜನಪರವಾದ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಅದರಲ್ಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಹಲವಾರು ಯೋಜನೆಗಳು ಅನುಕೂಲವಾಗಿವೆ ಎಂದು ಪ್ರತಿಭಟನಾಕಾರರು ಹೇಳಿದರು.
ಬಿಜೆಪಿ ನಾಯಕರು ಸಾಮಾಜಿಕ ನ್ಯಾಯದ ವಿರೋಧಿಗಳು, ದಲಿತರ ಏಳಿಗೆಯನ್ನು ಸಹಿಸದವರು, ಅದಕ್ಕಾಗಿ ಸುಳ್ಳು ಆರೋಪಗಳ ಮೂಲಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರು ಕ್ಷಮೆ ಕೇಳಬೇಕು ಎಂದು ಮಹಿಳಾ ಸದಸ್ಯರು ಒತ್ತಾಯಿಸಿದರು.






.jpg)
.jpg)

