ಬೆಳ್ತಂಗಡಿ: ಸರಕಾರಿ ಗೌರವದೊಂದಿಗೆ ಸ್ವಾತಂತ್ರ್ಯ ಹೋರಾಟಗಾರ ಭೋಜರಾಜ ಹೆಗ್ಡೆ ಅಂತ್ಯಕ್ರಿಯೆ
![ಬೆಳ್ತಂಗಡಿ: ಸರಕಾರಿ ಗೌರವದೊಂದಿಗೆ ಸ್ವಾತಂತ್ರ್ಯ ಹೋರಾಟಗಾರ ಭೋಜರಾಜ ಹೆಗ್ಡೆ ಅಂತ್ಯಕ್ರಿಯೆ ಬೆಳ್ತಂಗಡಿ: ಸರಕಾರಿ ಗೌರವದೊಂದಿಗೆ ಸ್ವಾತಂತ್ರ್ಯ ಹೋರಾಟಗಾರ ಭೋಜರಾಜ ಹೆಗ್ಡೆ ಅಂತ್ಯಕ್ರಿಯೆ](/images/placeholder.jpg)
ಬೆಳ್ತಂಗಡಿ, ನ.10: ನಿನ್ನೆ ನಿಧನರಾದ ತಾಲೂಕಿನ ಏಕೈಕ ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ(98)ಯವರ ಅಂತ್ಯ ಸಂಸ್ಕಾರವು ಇಂದು ಬೆಳಗ್ಗೆ ಸರಕಾರಿ ಗೌರವಗಳೊಂದಿಗೆ ನೆರವೇರಿತು.
ಭೋಜರಾಜ ಹೆಗ್ಡೆ ಅವರ ಮನೆಯಲ್ಲಿ ಬುಧವಾರ ಬೆಳಗ್ಗೆ 9:30ಕ್ಕೆ ಮೂರು ಸುತ್ತು ಕುಶಾಲತೋಪು ಸಿಡಿಸಿ ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಈ ವೇಳೆ ಶಾಸಕ ಕೆ ಹರೀಶ ಪೂಂಜಾ, ಮಾಜಿ ಶಾಸಕ ಕೆ.ವಸಂತ ಬಂಗೇರ, ಜಿಪಂ ಮಾಜಿ ಸದಸ್ಯೆ ರಾಜಶ್ರೀ ಹೆಗ್ಡೆ, ಪಡಂಗಡಿ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಸಂತೋಷ್ ಕುಮಾರ್ ಜೈನ್, ಸಿ.ಎ. ಬ್ಯಾಂಕ್ ಅಧ್ಯಕ್ಷ ಯೋಗೀಶ್ ನಡಕರ, ಹಿರಿಯ ವಕೀಲ ನೇಮಿರಾಜ್ ಶೆಟ್ಟಿ ಉಪಸ್ಥಿತರಿದ್ದರು.
ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ., ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ವೇಣೂರು ಅಜಿಲ ಸೀಮೆಯ ತಿಮ್ಮಣ್ಣರಸ ಡಾ.ಪದ್ಮಪ್ರಸಾದ್ ಅಜಿಲ ಸಹಿತ ಹಲವು ಗಣ್ಯರು, ಒಡನಾಡಿಗಳು, ಕುಟುಂಬಸ್ಥರು ಅಂತಿಮ ನಮನ ಸಲ್ಲಿಸಿದರು.
Next Story