ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ಮುಖಂಡರ ಹೆಸರುಗಳಿವೆ: ಸಿಎಂ ಬೊಮ್ಮಾಯಿ

ಹೊಸದಿಲ್ಲಿ, ನ.10: ಬಿಟ್ ಕಾಯಿನ್ ಹಗರಣದಲ್ಲಿ ಭಾಗಿದವರ ಪೈಕಿ ಅನೇಕ ಕಾಂಗ್ರೆಸ್ ಮುಖಂಡರ ಹೆಸರುಗಳು ಇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಇಲ್ಲಿನ ಕರ್ನಾಟಕ ಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತರಲಿದೆ' ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಪ್ರಿಯಾಂಕ್ ಖರ್ಗೆಗೆ ಸಂಪೂರ್ಣ ಮಾಹಿತಿ ಇಲ್ಲ. ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾದವರ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕರ ಹೆಸರುಗಳಿವೆ. ಅದರ ಬಗ್ಗೆ ಮೊದಲು ಚಿಂತನೆ ಮಾಡಲು ಹೇಳಿ ಎಂದರು.
Next Story