ಜಾರ್ಖಂಡ್:ಟ್ರಕ್‌ಗೆ ಬಸ್ ಡಿಕ್ಕಿ,ಪಶ್ಚಿಮಬಂಗಾಳದ 75 ಯಾತ್ರಿಕರಿಗೆ ಗಾಯ

ರಾಂಚಿ: ಜಾರ್ಖಂಡ್‌ನ ಹಝಾರಿಬಾಗ್ ಜಿಲ್ಲೆಯಲ್ಲಿ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಪಶ್ಚಿಮ ಬಂಗಾಳದ ಸುಮಾರು 75 ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಚೌಪರಾನ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 2 ರ ದನುವಾ-ಭಾನುವಾ ಘಾಟ್‌ನಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಸೋಮವಾರ ರಾತ್ರಿ ಸಂಭವಿಸಿದ ಅಪಘಾತದ ಪರಿಣಾಮವು ತುಂಬಾ ತೀವ್ರವಾಗಿದ್ದು, ಎಲ್ಲಾ 75 ಪ್ರಯಾಣಿಕರು ಗಾಯಗೊಂಡಿದ್ದಾರೆ ಮತ್ತು ಅವರಲ್ಲಿ ಒಂಬತ್ತು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾತ್ರಾರ್ಥಿಗಳು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಸಿರ್‌ಹತ್‌ನಿಂದ ಬೋಧಗಯಾಗೆ ಪ್ರಯಾಣಿಸುತ್ತಿದ್ದರು ಎಂದು ಅವರು ಹೇಳಿದರು.
ಹೆಚ್ಚಿನ ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ಆರೋಗ್ಯ ಕೇಂದ್ರದಿಂದ ಬಿಡುಗಡೆ ಮಾಡಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡ ಒಂಬತ್ತು ಪ್ರಯಾಣಿಕರನ್ನು ಹಝಾರಿಬಾಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.