Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ...

ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ10 Nov 2021 10:10 PM IST
share
ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.10: ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವಾಗ ಎಲ್ಲಾ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸುವುದರಿಂದ ಅಪಘಾತಗಳಾಗು ವುದನ್ನು ತಪ್ಪಿಸಲು ಸಾಧ್ಯ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಸ್ತೆಯಲ್ಲಿ ವಾಹನ ಚಾಲನಾ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸುವುದು, ಹೆಲ್ಮೆಟ್ ಧರಿಸುವುದರಿಂದ ಅಪಘಾತಗಳಾದರೂ ಸುರಕ್ಷಿತ ವಾಗಿರಬಹುದು. ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಅಪಘಾತ ಗಳಿಂದ ಮುಕ್ತವಾಗಬಹುದು ಎಂದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಬ್ಲಾಕ್ ಸ್ಪಾಟ್‌ಗಳನ್ನು ಮುಂದಿನ 2 ತಿಂಗಳ ಅವಧಿಯಲ್ಲಿ ಸಂಪೂರ್ಣ ವಾಗಿ ಸಂಚಾರಕ್ಕೆ ಸುರಕ್ಷಿತವನ್ನಾಗಿ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರಾದೇಶಿಕ ಸಾರಿಗೆ ಅಧಿಕಾರಿ, ಪೊಲೀಸ್ ಮತ್ತು ರಾ.ಹೆದ್ದಾರಿ ಇಲಾಖೆಯ ಅಧಿಕಾರಿಗಳು ಮತ್ತೊಮ್ಮೆ ಈ ಎಲ್ಲಾ ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಪರಿಶೀಲಿಸಿ, ಅಲ್ಲಿನ ಸ್ಥಿತಿಗತಿ ಮತ್ತು ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ವಿವರವಾದ ವರದಿಯನ್ನು ನೀಡುವಂತೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಗತ್ಯ ಸೂಚನಾ ಫಲಕಗಳು, ಎಚ್ಚರಿಕೆ ಫಲಕಗಳು ಸೇರಿದಂತೆ ವಾಹನಗಳ ಸುಗಮ ಮತ್ತು ಸುರಕ್ಷಿತ ಪ್ರಯಾಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಅವರು ಸೂಚನೆಗಳನ್ನು ನೀಡಿದರು.

ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ಒಬ್ಬರು ಶಿಕ್ಷಕರಿಗೆ ಪೊಲೀಸ್ ಮತ್ತು ಸಾರಿಗೆ ಇಲಾಖೆ ವತಿಯಿಂದ ಸೂಕ್ತ ತರಬೇತಿ ನೀಡಿ ಅವರ ಮೂಲಕ ಮಕ್ಕಳಿಗೆ ಅರಿವು ಮೂಡಿಸುವಂತೆ ಸೂಚಿಸಿದರು. ಪ್ರಾಥಮಿಕ ಹಂತದಲ್ಲಿ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ 10 ದಿನಗಳ ಒಳಗೆ ತರಬೇತಿ ಆಯೋಜಿಸುವಂತೆ ತಿಳಿಸಿದರು.

ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಅನುಷ್ಠಾನ ಮಾಡುವ ಎಲ್ಲಾ ಇಲಾಖೆ ಗಳು ರಸ್ತೆ ನಿರ್ಮಾಣದ ಸಂದರ್ಭದಲ್ಲಿಯೇ ಸುಗಮ ಮತ್ತು ಸುರಕ್ಷಿತ ಪ್ರಯಾಣಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ತಪ್ಪದೇ ಅಳವಡಿಸಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಕ್ತಾಯಗೊಂಡಿದ್ದರೂ ಸಹ ರಸ್ತೆ ಬದಿಯಲ್ಲಿ ರಸ್ತೆ ನಿರ್ಮಾಣ ಸಾಮಗ್ರಿಗಳನ್ನು ತೆರವುಗೊಳಿಸದೇ ಇರುವುದರಿಂದ ಹಲವು ಅಪಘಾತಗಳು ಸಂಭವಿಸುತ್ತಿವೆ. ಕೂಡಲೇ ಅಂತಹ ಎಲ್ಲಾ ಸಾಮಗ್ರಿ ಗಳನ್ನು ತೆರವುಗೊಳಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ತಿಳಿಸಿದರು. ಜಿಲ್ಲೆಯಲ್ಲಿ 2021ರ ಜನವರಿ ತಿಂಗಳಿನಿಂದ ಸೆಪ್ಟಂಬರ್‌ವರೆಗೆ ಸಂಚಾರಿ ನಿಯಮ ಉಲ್ಲಂಸಿರುವ ಕುರಿತಂತೆ ಪೊಲೀಸ್ ಇಲಾಖೆಯಿಂದ ಒಟ್ಟು 48,000 ಪ್ರಕರಣಗಳನ್ನು ದಾಖಲಿಸಿ 2.26 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಎಸ್ಪಿ ತಿಳಿಸಿದರು.

ನೋಟೀಸು ಜಾರಿ: ರಸ್ತೆ ಸುರಕ್ಷತಾ ಸಭೆಗೆ ನೋಟೀಸ್ ನೀಡಿದ್ದರೂ ಸಹ ಆಗಮಿಸದ ರಾಷ್ಟ್ರೀಯ ಹೆದ್ದಾರಿ 66ರ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X