ಅಸ್ಸಾಂನ ಕರೀಮ್ಗಂಜ್ ನಲ್ಲಿ ವೇಗವಾಗಿ ಬಂದ ಟ್ರಕ್ಗೆ ಆಟೋ ರಿಕ್ಷಾ ಡಿಕ್ಕಿ, 9 ಮಂದಿ ಸಾವು
photo: India Today
ಗುವಾಹಟಿ: ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಆಟೋ ರಿಕ್ಷಾ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.
ಅಸ್ಸಾಂ-ತ್ರಿಪುರಾ ಗಡಿಯಲ್ಲಿರುವ ಕರೀಮ್ಗಂಜ್ ಜಿಲ್ಲೆಯ ಪಥರ್ಕಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈತಖಾಲ್ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಗುರುವಾರ ನಸುಕಿನಲ್ಲಿ ಈ ಘಟನೆ ನಡೆದಿದೆ.
ವರದಿಗಳ ಪ್ರಕಾರ, ಮೃತರು ಛತ್ ಪೂಜಾ ವಿಧಿವಿಧಾನಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು.
ಟ್ರಕ್ ಹಾಗೂ ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ನಂತರ ಈ ಅಪಘಾತ ಸಂಭವಿಸಿದೆ ಎಂದು ಕರೀಂಗಂಜ್ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೈತಖಾಲ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 8 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಒಂದು ಮೃತದೇಹ ಕರೀಂಗಂಜ್ ಸಿವಿಲ್ ಆಸ್ಪತ್ರೆಗೆ ತಲುಪಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Next Story