ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾಗೆ ವಿಶ್ರಾಂತಿ;ಮೊದಲ ಪಂದ್ಯಕ್ಕೆ ಅಜಿಂಕ್ಯ ರಹಾನೆ ನಾಯಕ

ಹೊಸದಿಲ್ಲಿ: ಈ ತಿಂಗಳಾಂತ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಭಾರತವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.
ಕಾನ್ಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲು ಆಯ್ಕೆಗಾರರು ನಿರ್ಧರಿಸಿದ ನಂತರ, ರೋಹಿತ್ ಶರ್ಮಾ ಅವರ ಕೆಲಸದ ಹೊರೆಯನ್ನು ನಿರ್ವಹಿಸಲು ಇಡೀ ಟೆಸ್ಟ್ ಸರಣಿಯಿಂದ ಹೊರಗುಳಿಯಲು ಗುರುವಾರ ನಿರ್ಧರಿಸಲಾಗಿದೆ.
ಗುರುವಾರ ಆಯ್ಕೆ ಸಮಿತಿ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ನಾಲ್ವರು ಟೆಸ್ಟ್ ಆಟಗಾರರಾದ ಜಸ್ಪ್ರೀತ್ ಬುಮ್ರಾ, ಮುಹಮ್ಮದ್ ಶಮಿ, ರಿಷಭ್ ಪಂತ್ ಹಾಗೂ ಶಾರ್ದೂಲ್ ಠಾಕೂರ್ ಅವರು ಟೆಸ್ಟ್ ಸರಣಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು TOI ಈಗಾಗಲೇ ವರದಿ ಮಾಡಿದೆ.
ಮೂಲಗಳ ಪ್ರಕಾರ, ಮೊದಲ ಟೆಸ್ಟ್‌ನಲ್ಲಿ ಕೊಹ್ಲಿ ವಿಶ್ರಾಂತಿ ಕೇಳಿದ ನಂತರ ಹಂಗಾಮಿ ನಾಯಕನ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಮೊದಲ ಟೆಸ್ಟ್‌ನಲ್ಲಿ ರೋಹಿತ್‌ಗೆ ನಾಯಕತ್ವ ನೀಡಿ ನಂತರ ಮುಂಬೈನಲ್ಲಿ ಎರಡನೇ ಪಂದ್ಯಕ್ಕೆ ವಿಶ್ರಾಂತಿ ನೀಡುವ ಪ್ರಸ್ತಾಪವಿತ್ತು.
ಆದಾಗ್ಯೂ, ರೋಹಿತ್ ಅವರ ಕೆಲಸದ ಹೊರೆಯ ಸಂಪೂರ್ಣ ವಿಶ್ಲೇಷಣೆಯ ನಂತರ, ಹೊಸ ಪೂರ್ಣಾವಧಿಯ ಟ್ವೆಂಟಿ-20 ತಂಡದ ನಾಯಕನಿಗೆ ದೀರ್ಘಕಾಲದ ವಿಶ್ರಾಂತಿಯ ಅಗತ್ಯವಿದೆ ಎಂದು ನಿರ್ಧರಿಸಲಾಯಿತು
ಶುಭಮನ್ ಗಿಲ್ ಹಾಗೂ ಮಯಾಂಕ್ ಅಗರ್ವಾಲ್ ಫಾರ್ಮನಲ್ಲಿರುವ ಕೆಎಲ್ ರಾಹುಲ್ ಜೊತೆ ಆರಂಭಿಕ ಜೊತೆಗಾರರಾಗಲು ಸಜ್ಜಾಗಿದ್ದು, ವೃದ್ಧಿಮಾನ್ ಸಹಾ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಲಿದ್ದಾರೆ.